ಬೆಂಗಳೂರು: ಶಾಲೆಗಳಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡಿದರೆ ಅದರಿಂದ ವಿದ್ಯಾರ್ಥಿಗಳಿಗೆ ಅನನುಕೂಲವೇ ಹೆಚ್ಚು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಯಲ್ಲಿ ಅಂಕದ ಬದಲಿಗೆ ಗ್ರೇಡ್ ನೀಡುವ ತರಾತುರಿಯ ಕ್ರಮ ತೆಗೆದುಕೊಂಡಿದ್ದು ತುಘಲಕ್ ಆಡಳಿತಕ್ಕೆ ಸಾಕ್ಷಿ ಎಂದು ಟೀಕಿಸಿದರು.

‘ನಾನೂ ಕನ್ನಡಾಭಿಮಾನಿ, ಕನ್ನಡ ಪರ ಹೋರಾಟ ಮಾಡಿ ಪೊಲೀಸರ ಲಾಠಿ ಪ್ರಹಾರದಲ್ಲಿ ಏಟು ತಿಂದವನೇ. ಆದರೆ, ಸರ್ಕಾರ ಹಿಂದಿ ವಿಷಯದಲ್ಲಿ ನಡೆದುಕೊಂಡ ರೀತಿ ಸರಿ ಇಲ್ಲ. ಯಾರೊಂದಿಗೂ ಚರ್ಚಿಸದೇ, ದಿಢೀರ್ ತೀರ್ಮಾನ ತೆಗೆದುಕೊಳ್ಳುವ ಮೂಲಕ ಚೆಲ್ಲಾಟ ಆಡಿದೆ’ ಎಂದು ಕಿಡಿಕಾರಿದರು.

‘ಶಾಲಾ ಶಿಕ್ಷಣದಲ್ಲಿ ತ್ರಿಭಾಷಾ ಸೂತ್ರ ಇದ್ದರೆ ಹೆಚ್ಚು ಸೂಕ್ತ. ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆ ಉರ್ದು, ದ್ವಿತೀಯ ಭಾಷೆ ಇಂಗ್ಲಿಷ್ ಇರುತ್ತದೆ. ಮೂರನೇ ಭಾಷೆಯಾಗಿ ಕನ್ನಡ ಓದುತ್ತಾರೆ. ತ್ರಿಭಾಷಾ ಸೂತ್ರ ಕೈಬಿಟ್ಟರೆ ಉರ್ದು ಶಾಲೆ ಮಕ್ಕಳು ಕನ್ನಡ ಕಲಿಯುವುದರಿಂದ ವಂಚಿತರಾಗುತ್ತಾರೆ’ ಎಂದು ಅಶೋಕ ಹೇಳಿದರು.

‘ಕನ್ನಡಕ್ಕೆ ಆದ್ಯತೆ ನೀಡಬೇಕೆಂಬುದು ನನ್ನ ಆಗ್ರಹ. ದ್ವಿಭಾಷಾ ಸೂತ್ರದಿಂದಲೇ ಕನ್ನಡ ಬೆಳೆಯುತ್ತದೆ ಎನ್ನಲು ಸಾಧ್ಯವಿಲ್ಲ. ತ್ರಿಭಾಷಾ ನೀತಿ ಕುರಿತು ದೀರ್ಘ ಚರ್ಚೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ದಾವಣಗೆರೆಯಲ್ಲಿ ಮುಸ್ಲಿಮರಿಗೆ ಅನ್ಯಾಯವಾಗಿರುವುದಕ್ಕೆ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದ್ದಾರೆ. ಸಚಿವ ಜಮೀರ್ ಅಹಮದ್ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಸಂಪೂರ್ಣ ಗೊಂದಲದಲ್ಲಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಇಂದೇ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಬರಲಿದೆ. ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಬಿಜೆಪಿ ಗೆಲ್ಲಲಿದೆ. ನರೇಂದ್ರ ಮೋದಿ ಪ್ರಧಾನಿಯಾಗಿದ್ದರಿಂದಾಗಿ ನಮಗೆ ಯಾವುದೇ ಸಮಸ್ಯೆಯಾಗಿಲ್ಲ. ಬಿಜೆಪಿ ಬೆಂಬಲಿಸುತ್ತೇವೆ ಎಂದು ಮುಸ್ಲಿಮರು ಹೇಳಿದ್ದಾರೆ. ಅವರ ಈ ನಡೆಯನ್ನು ಸ್ವಾಗತಿಸುತ್ತೇನೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-35-2078405146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.