ಬ್ರಹ್ಮಾವರ: ‘ಮಾಹಿತಿಯ ಕೊರತೆಯಿಂದಾಗಿ ಇಂದಿನ ಮಕ್ಕಳು ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಮಾರ್ಗದರ್ಶನ ನೀಡಿ, ಶೈಕ್ಷಣಿಕವಾಗಿ ಬಲಿಷ್ಠಗೊಳಿಸಬೇಕು’ ಎಂದು ಚಿಂತಕ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ ಹೇಳಿದರು.

ಕೋಟದ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ, ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಅರಿವು ಡಿಜಿಟಲ್ ಗ್ರಂಥಾಲಯದ ಆಶ್ರಯದಲ್ಲಿ ಆಯೋಜಿಸಿದ್ದ ಶಿಕ್ಷಣ ಸಂಪದ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶೈಕ್ಷಣಿಕ ಚಟುವಟಿಕೆಗಳು ಪಠ್ಯಕ್ಕೆ ಸೀಮಿತವಾಗದೆ ವಿಸ್ತಾರಗೊಳ್ಳಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಜ್ಞಾನದ ಹರಿವು ಹೆಚ್ಚಬೇಕು. ಈ ಉದ್ದೇಶದಿಂದಲೇ ಶಿಕ್ಷಣ ಸಂಪದ ಕಾರ್ಯಕ್ರಮ ರೂಪಿಸಲಾಗಿದ್ದು, ಎಲ್ಲರ ಸಹಕಾರ ಅಗತ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಶಿಕ್ಷಣ ಕ್ಷೇತ್ರದಲ್ಲಿ ಬೇಕಾದಷ್ಟು ಅವಕಾಶಗಳಿವೆ, ಆದರೆ ಅವುಗಳ ಸದ್ಬಳಕೆಯಾಗುತ್ತಿಲ್ಲ. ಇಬ್ರಾಹಿಂ ಸಾಹೇಬರ ಈ ಶೈಕ್ಷಣಿಕ ಚಿಂತನೆ ಶ್ಲಾಘನೀಯ ಎಂದರು.

ಸುಬ್ರಾಯ ಆಚಾರ್, ಶಿಬಿರದ ಮೇಲ್ವಿಚಾರಕಿ ಶಾರದಾ ಜೈನ್ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು. ಉನ್ನತಿ ಹಂದಟ್ಟು ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-28-1648600084

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.