ಬ್ರಹ್ಮಾವರ: ಓದು ಮನುಷ್ಯನನ್ನು ರೂಪಿಸಿದರೆ, ಸಾಹಿತ್ಯ ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸುತ್ತದೆ. ವಿದ್ಯಾರ್ಥಿಗಳು ಸಾಹಿತ್ಯದತ್ತ ಒಲವು ಬೆಳೆಸಿಕೊಳ್ಳುವುದು ಇಂದಿನ ಅಗತ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ್ ಹೇಳಿದರು.

ಇಲ್ಲಿನ ಮಾಬುಕಳದ ಫಾರ್ಚುನ್ ಅಕಾಡೆಮಿ ಆಫ್ ಸೈನ್ಸ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ವತಿಯಿಂದ ಆಯೋಜಿಸಿದ್ದ ‘ಸಾಹಿತ್ಯ ಸಂಚಾರ- 62’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲೇಜಿನ ವ್ಯವಸ್ಥಾಪಕ ತಾರಾನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕ ಪವನ್, ಸಾಹಿತ್ಯವು ಸಮಾಜ ಮತ್ತು ಜನಸಂಸ್ಕೃತಿಗಳ ಬಗ್ಗೆ ತಾತ್ವಿಕ ತಿಳಿವಳಿಕೆಮೂಡಿಸುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿ ಸರಿತಾ ಉಪಾಧ್ಯಾಯ ಅವರು ವೈದ್ಯಕೀಯ ಕ್ಷೇತ್ರ ಹಾಗೂ ಸಾಹಿತ್ಯದ ನಡುವಿನ ಸಂಬಂಧದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ನರೇಂದ್ರ ಕುಮಾರ್ ಕೋಟ ಅವರು ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಮಹಾನ್ ವ್ಯಕ್ತಿಗಳ ವಿವರ ನೀಡಿದರು.

ಮಹಾಲಕ್ಷ್ಮಿ ಸೋಮಯಾಜಿ ಅವರು ಆಂಗಿಕ ಅಭಿನಯದ ಮೂಲಕ ಸಾಹಿತ್ಯದ ಮೆರುಗನ್ನು ಹೆಚ್ಚಿಸಿದರೆ, ಅಚ್ಯುತ ಪೂಜಾರಿ ಅವರು ತಮ್ಮ ಸಾಧನೆಯ ಹಾದಿಯನ್ನು ಹಂಚಿಕೊಂಡು, ಕನ್ನಡ ಗೀತೆಗಳನ್ನು ಹಾಡಿ ರಂಜಿಸಿದರು.

ವಿದ್ಯಾರ್ಥಿ ಚೇತನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-1465052228

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.