ಬ್ರಹ್ಮಾವರ : ಇಲ್ಲಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರಂಭ ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ಜರುಗಿತು.

ಸೂರಾಲು ದೇವಿಪ್ರಸಾದ ತಂತ್ರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಆಗುವುದೆಲ್ಲ ಒಳ್ಳೆಯದಕ್ಕೆ ಎಂಬ ಆಶಾಭಾವನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಕೇವಲ ವಿದ್ಯೆ ಕಲಿತರೆ ಸಾಲದು. ಒಳ್ಳೆಯ ಹೃದಯ, ಮನಸ್ಸು ಹಾಗೂ ಹಿರಿಯರನ್ನು ಗೌರವಿಸುವ ಸಂಸ್ಕಾರವಂತರಾಗಬೇಕು. ಶಾಲೆಯಲ್ಲಿ ಕಲಿತ ಸಂಸ್ಕಾರಗಳು ಮನೆಯಲ್ಲಿಯೂ ಅಭ್ಯಾಸವಾಗಬೇಕು ಎಂದು ಹೇಳಿದರು.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರತಿನಿಧಿ ವಸಂತ್ ಕುಮಾರ್ ಎಂ.ಎಸ್.ಮಾತನಾಡಿ, ‘ಸಾಹಿತ್ಯ, ಶಿಕ್ಷಣ, ಸೇವೆ ಮತ್ತು ಆರೋಗ್ಯ ಎಂಬ ನಾಲ್ಕು ಆಯಾಮಗಳಲ್ಲಿ ರಾಷ್ಟ್ರೋತ್ಥಾನವು ತನ್ನ ಸಾಮಾಜಿಕ ಸೇವೆಯನ್ನು ವಿಸ್ತರಿಸಿದೆ. ಪಂಚಮುಖಿ ಶಿಕ್ಷಣದ ಮೂಲಕ ವಿದ್ಯಾರ್ಥಿಗಳನ್ನು ದೇಶದ ಸದೃಢ ಮತ್ತು ಸತ್ಪ್ರಜೆಗಳನ್ನಾಗಿಸುವುದೇ ರಾಷ್ಟ್ರೋತ್ಥಾನದ ಮುಖ್ಯ ಉದ್ದೇಶ’ ಎಂದರು.

ಸಂಚಾಲನ ಸಮಿತಿ ಅಧ್ಯಕ್ಷ ಸಾಧು ಸಾಲಿಯಾನ್, ಕಾರ್ಯದರ್ಶಿ ರಿಷಿರಾಜ್, ಸದಸ್ಯರಾದ ಮಿಥುನ್ ಕುಂದರ್, ರಾಘವೇಂದ್ರ ಕುಂದರ್, ವಿದ್ಯಾಕೇಂದ್ರದ ಪ್ರಾಂಶುಪಾಲೆ ಪೂರ್ಣಿಮಾ, ಪಿಯು ಕಾಲೇಜಿನ ಪ್ರಾಂಶುಪಾಲೆ ಭಾಗ್ಯಶ್ರೀ ಐತಾಳ್ ಉಪಸ್ಥಿತರಿದ್ದರು.

ಸಂಯೋಜಕಿ ಅನಿತಾ ಮಜುಂದಾರ್ ಶಾಲೆಯ ನಿಯಮ ಮತ್ತು ಕಾರ್ಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಕಿ ಪ್ರಜ್ಞಾ ಕಾಮತ್ ಸ್ವಾಗತಿಸಿ, ಚಿತ್ರ ಬೆಂಡೆ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-28-68927147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.