ಬ್ರಹ್ಮಾವರ: ಮಕ್ಕಳು ಸಮಾಜದ ಅಮೂಲ್ಯ ಆಸ್ತಿ. ನಮ್ಮ ಕುಲಕಸುಬನ್ನು ಕೀಳರಿಮೆಯಿಂದ ನೋಡದೆ, ಅದನ್ನು ಹೆಮ್ಮೆಯಿಂದ ಉಳಿಸಿ ಬೆಳೆಸುವ ಕೆಲಸ ಯುವಪೀಳಿಗೆಯಿಂದ ಆಗಬೇಕಿದೆ ಎಂದು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ ಹೇಳಿದರು.

ಬ್ರಹ್ಮಾವರ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಮಂಗಳವಾರ ಬ್ರಹ್ಮಾವರ ವ್ಯವಸಾಯ ಸಹಕಾರಿ ಸಂಘದ ‘ಉನ್ನತಿ’ ಸಭಾಂಗಣದಲ್ಲಿ ನಡೆದ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಕೊಡೆ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂದೀಪ್ ಪರಿಯಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖ್ಯ ಶಿಕ್ಷಕ ಸುಬ್ಬಣ್ಣ ಕೋಣಿ, ‘ಮಕ್ಕಳು ಸಮಾಜದ ಆಸ್ತಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ, ವಿದ್ಯಾರ್ಥಿಗಳು ಗುರು-ಹಿರಿಯರ ಬಗ್ಗೆ ಗೌರವ, ಆರೋಗ್ಯದ ಬಗ್ಗೆ ಎಚ್ಚರ, ದೇಶದ ಬಗ್ಗೆ ಅಭಿಮಾನ ಹಾಗೂ ಶಿಕ್ಷಣದ ಮಹತ್ವ ಅರಿತು ಜೀವನದಲ್ಲಿ ಮುನ್ನಡೆಯಬೇಕು ಎಂದರು.

ಸಾಧಕರಾದ ಶಶಿಧರ, ರಾಧು ಪೂಜಾರ್ತಿ ಅವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ಸಮಾಜದ ನಾಲ್ವರು ಪ್ರತಿಭಾವಂತ ಮಕ್ಕಳನ್ನು ಅಭಿನಂದಿಸಲಾಯಿತು.

100 ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಹಾಗೂ ಕೊಡೆಗಳನ್ನು ಉಚಿತವಾಗಿ ವಿತರಿಸಲಾಯಿತು. ಅಮ್ಮುಂಜೆ ಗೋವಿಂದ ಭಂಡಾರಿ, ಸವಿತಾ ಸಮಾಜ ಸೊಸೈಟಿಯ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ ಮತ್ತು ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮುಲ್ಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾಜದ ಆರು ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪುನೀತ್ ಭಂಡಾರಿ ಬ್ರಹ್ಮಾವರ ಸ್ವಾಗತಿಸಿದರು. ವಾಣಿಶ್ರೀ ಗೋವಿಂದ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಪ್ರದೀಪ್ ಬಂಗೇರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-1469893515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.