ಬ್ರಹ್ಮಾವರ: ‘ವಿದ್ಯಾರ್ಥಿಯಾಗಿರುವ ಸಮಯವು ಜೀವನ ಮಹತ್ತರ ಘಟ್ಟವಾಗಿರುತ್ತದೆ. ಆ ದಿನಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಉದ್ಯಮಿ ಆನಂದ್ ಸಿ. ಕುಂದರ್ ಸಲಹೆ ನೀಡಿದರು.

ಕೋಟ ಪಡುಕರೆಯ ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ದಾನಿಗಳು ನೀಡುವ ಸವಲತ್ತುಗಳನ್ನು ಬಳಸಿಕೊಂಡು ಭವಿಷ್ಯ ಸುಭದ್ರಗೊಳಿಸಬೇಕು ಎಂದರು.

ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ‘ವಿದ್ಯಾನಿಧಿ’ ವಿತರಿಸಲಾಯಿತು. ಉಪನ್ಯಾಸಕರಾದ ಸುನಿತಾ ವಿ ಮತ್ತು ಸುಬ್ರಹ್ಮಣ್ಯ ಅವರೂ ಪ್ರೋತ್ಸಾಹ ಧನ ನೀಡಿದರು.

ಗಣಕಯಂತ್ರ ನೀಡಿದ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ರಮೇಶ್ ವೈದ್ಯ ಅವರನ್ನು ಗೌರವಿಸಲಾಯಿತು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮಮತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಮೇಶ್ ಆಚಾರ್, ಐಕ್ಯುಎಸಿ ಸಂಚಾಲಕ ಪ್ರೊ. ಸುಬ್ರಹ್ಮಣ್ಯ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ್ ಬಿಲ್ಲವ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಭಟ್ ಪಾಲ್ಗೊಂಡಿದ್ದರು.

ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಪ್ರೀತಿ, ಸಾಗರ್, ಸುಪ್ರೈತಾ, ಸೃಷ್ಟಿ ಚಂದನ್ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಶ್ರದ್ಧಾ ಮತ್ತು ಆಕಾಶ್ ಪಾಲ್ಗೊಂಡಿದ್ದರು. ಪ್ರಾಂಶುಪಾಲ ಪ್ರೊ. ರಾಜೇಂದ್ರ ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಪ್ರೊ ಶಂಕರ ನಾಯ್ಕ ಬಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅಫಿಪಾ ಆಲ್ಫಿಯಾ ನಿರೂಪಿಸಿದರು. ಉಪನ್ಯಾಸಕಿ ಸೌಮ್ಯಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-240294125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.