ಬ್ರಹ್ಮಾವರ: ‘ಇಂದಿನ ದಿನಗಳಲ್ಲಿ ಅತಿಯಾದ ಮೊಬೈಲ್ ಬಳಕೆ ಮಕ್ಕಳ ಮನಃಸ್ಥಿತಿಯ ಮೇಲೆ ಗಂಭೀರ, ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು ಜಾಗೃತಿ ವಹಿಸಿ, ಅವರಿಗೆ ಉತ್ತಮ ಸಂಸ್ಕಾರ ನೀಡಿ ಸುಸಂಸ್ಕೃತರನ್ನಾಗಿ ರೂಪಿಸಬೇಕು’ ಎಂದು ಸಾಮಾಜಿಕ ಚಿಂತಕ ಋಷಿರಾಜ್ ಸಾಸ್ತಾನ ಹೇಳಿದರು.

ಪಾಂಡೇಶ್ವರ ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಆಶ್ರಯದಲ್ಲಿ ಒಂದು ವಾರ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸೋಮವಾರ ಅವರು ಮಾತನಾಡಿದರು.

ಪಂಚಾಯಿತಿ ಆಯೋಜಿಸಿರುವ ಶಿಬಿರ ಮಕ್ಕಳ ಕೌಶಲಾಭಿವೃದ್ಧಿಗೆ ಪೂರಕವಾಗಿವೆ. ಪೋಷಕರು ಮಕ್ಕಳಿಗೆ ಭಾರತೀಯ, ಹಿಂದೂ ಪರಂಪರೆ, ಗುರು ಪರಂಪರೆ, ಆಚಾರ– ವಿಚಾರಗಳ ಬಗ್ಗೆ ತಿಳಿಸಬೇಕು. ವ್ಯಕ್ತಿತ್ವ ರೂಪಿಸುವಲ್ಲಿ ಸಂಸ್ಕಾರದ ಪಾತ್ರ ದೊಡ್ಡದು’ ಎಂದು ಕಿವಿಮಾತು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರು ಮಕ್ಕಳಲ್ಲಿ ಕೌಶಲಗಳನ್ನು ಹೇಗೆ ವೃದ್ಧಿಸಿಕೊಳ್ಳಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು. 8 ದಿನಗಳಲ್ಲಿ ಮಾರ್ಗದರ್ಶನ ನೀಡಿದ ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಲಾಯಿತು.

ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳನ್ನು 4 ತಂಡಗಳಾಗಿ ವಿಂಗಡಿಸಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದ 2 ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಪಾಂಡೇಶ್ವರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಂದನಾ ಅಧ್ಯಕ್ಷತೆ ವಹಿಸಿದ್ದರು. ಉಷಾ ಗಣೇಶ್ ಪೂಜಾರಿ ನಿರೂಪಿಸಿದರು. ಗ್ರಂಥಪಾಲಕಿ ಜ್ಯೋತಿ ಪೂಜಾರಿ ಧನ್ಯವಾದ ಸಮರ್ಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-28-800127565

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.