ಬ್ರಹ್ಮಾವರ: ತಾಲ್ಲೂಕಿನ ಕೋಟ ಪಡುಕರೆಯಲ್ಲಿರುವ ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ರಾಜೇಂದ್ರ ಎಸ್. ನಾಯಕ್ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ಆಧುನಿಕ ಸೌಲಭ್ಯಗಳು ಹಾಗೂ ಉತ್ತಮ ಕಲಿಕಾ ವಾತಾವರಣದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡುವಂತೆ ತಿಳಿಸಿದರು.

ಮುಖ್ಯ ಅತಿಥಿಯಾಗಿ ದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಮೇಶ್ ಎಸ್. ಕುಂದರ್, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಜನೆಯೇ ಮುಖ್ಯ. ಇದರಲ್ಲಿ ಯಾವುದೇ ರಾಜಿ ಬೇಡ ಎಂದರು.

ಸಭೆಯ ನಂತರ ಪ್ರತಿ ತರಗತಿಯ ಶೈಕ್ಷಣಿಕ ಸಲಹೆಗಾರರು ಆಯಾ ವಿದ್ಯಾರ್ಥಿಯ ಪೋಷಕರೊಂದಿಗೆ ಪ್ರತ್ಯೇಕವಾಗಿ ಸಂವಹನ ನಡೆಸಿದರು. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದ ವಿಶ್ಲೇಷಣೆ, ಹಾಜರಾತಿಯಲ್ಲಿನ ಏರಿಳಿತ, ವಿದ್ಯಾರ್ಥಿಗಳ ಶೈಕ್ಷಣಿಕ ಸುಧಾರಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್ ಉಪಸ್ಥಿತರಿದ್ದರು.

ರಕ್ಷಕ ಶಿಕ್ಷಕ ಸಂಘದ ಸಂಚಾಲಕ ಶಂಕರ್ ನಾಯ್ಕ್ ಬಿ. ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-2053500315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.