ಬ್ಯಾಡಗಿ: ರಾಜ್ಯದಾದ್ಯಂತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮೇ 28ರಿಂದ ಪುನರಾರಂಭಗೊಳ್ಳುತ್ತಿದ್ದು, 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಆರಂಭಕ್ಕೆ ತಾಲ್ಲೂಕಿನೆಲ್ಲೆಡೆ ಸಿದ್ಧತೆಗಳು ನಡೆಯುತ್ತಿವೆ.

ಸ್ವತಃ ಶಿಕ್ಷಕರೇ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವುದು ಕಂಡು ಬಂದಿತು. ಕಳೆದ ಒಂದೂವರೆ ತಿಂಗಳಿಂದ ಬಿಡುವು ನೀಡಿದ್ದ ಶೈಕ್ಷಣಿಕ ಚಟುವಟಿಕೆಗಳು ಇಂದಿನಿಂದ ಗರಿಗೆದರಿವೆ. ಸೋಮವಾರ ನಡೆಯಲಿರುವ ಶಾಲಾ ಪ್ರಾರಂಭೋತ್ಸವಕ್ಕೆ ಮಕ್ಕಳನ್ನು ಅದ್ದೂರಿಯಾಗಿ ಸ್ವಾಗತಿಸುವ ಸಿದ್ಧತೆಗಳು ನಡೆಯುತ್ತಿವೆ.

‘ಅಡುಗೆ ಸಿಬ್ಬಂದಿ ಪಾತ್ರೆಗಳನ್ನು ಸ್ವಚ್ಛಗೊಳಿಸಿದರೆ, ಆವರಣದಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ಕಿತ್ತು ಒಂದೆಡೆ ಸಂಗ್ರಹಿಸುವ ಕೆಲಸಗಳು ನಡೆಯುತ್ತಿವೆ. ಸೋಮಾವಾರದಿಂದಲೇ ತರಗತಿಗಳ ಕಾರ್ಯಾರಂಭಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ, ಮಕ್ಕಳಿಗೆ ಪುಷ್ಪಗುಚ್ಚಗಳನ್ನು ನೀಡಿ ಸ್ವಾಗತಿಸಲಾಗುವುದು. ಶೈಕ್ಷಣಿಕ ವಾತಾವರಣದ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ.ಕೋಟಿ ಹೇಳಿದರು.

‘ಕಳೆದ ಎರಡು ದಿನಗಳಿಂದ ಶಿಕ್ಷಕರ ಸಭೆ ನಡೆಸಿ ಶಾಲಾರಂಭಕ್ಕೆ ಯಾವುದೇ ಲೋಪವಾಗದಂತೆ ನೋಡಿಕೊಳ್ಳುವಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ. ಈಗಾಗಲೆ ಶೇ 80ರಷ್ಟು ಪಠ್ಯ ಪುಸ್ತಕಗಳನ್ನು ಕ್ಲಸ್ಟರ್ ಮಟ್ಟದ ಶಾಲೆಗಳಿಗೆ ತಲುಪಿಸಲಾಗಿದ್ದು, ಸಂಬಂಧಿಸಿದ ಶಾಲಾ ಶಿಕ್ಷಕರು ಪುಸ್ತಕಗಳನ್ನು ತಮ್ಮ ಶಾಲೆಗಳಿಗೆ ತೆಗೆದುಕೊಂಡು ಹೋಗಿದ್ದಾರೆ. ಶಾಲಾ ಪ್ರಾರಂಭೋತ್ಸವ ದಿನದಂದು ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕಗಳ ವಿತರಣೆ ನಡೆಯಲಿದೆ. ಅಂದು ಹಾಲು, ಸಿಹಿಯೂಟ ಸವಿಯಲಿದ್ದಾರೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-22-1256956397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.