ಬ್ಯಾಡಗಿ: ಖಾಸಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ವಸೂಲಿ ಮಾಡುತ್ತಿರುವ ಡೊನೇಷನ್, ಅತಿಯಾದ ಶುಲ್ಕ ವಸೂಲಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ತಾಲ್ಲೂಕು ಘಟಕದ ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ರೇವಣಸಿದ್ದೇಶ್ವರ ಕೈಗಾರಿಕಾ ಕಾಲೇಜಿನಿಂದ ಆರಂಭಿಸಿದ ಪ್ರತಿಭಟನಾ ಮೆರವಣೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ದಾರಿಯದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಕೂಗಿದರು. ಬಳಿಕ ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ ನಾಗವತ್ ಮಾತನಾಡಿ, ಖಾಸಗಿ ಶಾಲಾ ಕಾಲೇಜುಗಳು 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಉಲ್ಲಂಘಿಸಿ ಲಕ್ಷಾಂತರ ರೂಪಾಯಿ ವಸೂಲಿ ಮಾಡುತ್ತಿವೆ, ಇದರಿಂದ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ತೊಂದರೆಯಾಗಿದ್ದು ಪ್ರತಿಯಿಂದು ಶಾಲಾ ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ವಿದ್ಯಾರ್ಥಿಗಳಿಂದ ಹೆಚ್ಚಿನ ಫೀ ಹಣವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಸರ್ಕಾರದ ನಿಯಮ ಉಲ್ಲಂಘಿಸಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಮಾನ್ಯತೆಯನ್ನು ರದ್ದು ಪಡಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಕೊಳ್ಳುವಂತೆ ಆಗ್ರಹಿಸಿದರು.

ತಾಲ್ಲೂಕು ಘಟಕದ ವಿದ್ಯಾರ್ಥಿ ಮುಖಂಡ ರಘು ಮಾತನಾಡಿದರು.

ಮುಖಂಡರಾದ ಬಸವರಾಜ ಮಡ್ಲೂರ, ಆಸೀಫ್ ನದಾಫ, ವೀರೇಶ ಹರಿಜನ, ಮಣಿಕಂಠ ಜೋಗಿನಹಳ್ಳಿ, ಪ್ರೀತಮ ಪೂಜಾರ, ಆಕಾಶ ಮಕರಿ ಹಾಗೂ ಇನ್ನಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-22-734766438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.