ಬೈಂದೂರು: ಗ್ರಾಮೀಣ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಿದಾಗ ಅವರಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ಮಣಿಪಾಲ ಫೌಂಡೇಶನ್ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ಮಣಿಪಾಲ ಸಂಸ್ಥೆಯು ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಮಾಜಮುಖಿ ಚಿಂತನೆಯ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದು ಬೆಂಗಳೂರು ಮಣಿಪಾಲ್ ಫೌಂಡೇಶನ್ ಸಿ.ಎಸ್.ಆರ್. ಸಂಯೋಜಕ ಲಿನ್ಸಿ ಮ್ಯಾಥ್ಯೂ ಹೇಳಿದರು.

ಬೆಂಗಳೂರು ಮಣಿಪಾಲ ಫೌಂಡೇಶನ್ ಹಾಗೂ ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಗೋವಿಂದಬಾಬು ಪೂಜಾರಿ ದತ್ತು ಸ್ವೀಕಾರ ಪಡೆದ ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ₹7 ಲಕ್ಷ ಮೌಲ್ಯದ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗೋವಿಂದಬಾಬು ಪೂಜಾರಿ ಮಾತನಾಡಿ, ಶಾಲೆಯು ಊರಿನ ದೇವಸ್ಥಾನ ಇದ್ದಂತೆ. ಶಾಲೆಗೆ ನೀಡುವ ಕೊಡುಗೆ ದೇವರಿಗೆ ಸೇವೆ ಸಲ್ಲಿಸಿದಂತೆ. ಶಾಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ಮಕ್ಕಳ ಕೌಶಲ ಶಿಕ್ಷಣ ಹೆಚ್ಚಿಸಲು ಪೋಷಕರು ಕಾಳಜಿವಹಿಸುವ ಅಗತ್ಯವಿದೆ ಎಂದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ರಮೇಶ ವಿ. ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಸಂದೀಪನ್ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಬಿ. ವಿಶ್ವೇಶ್ವರ ಅಡಿಗ, ಬೆಂಗಳೂರು ಮಣಿಪಾಲ ಫೌಂಡೇಶನ್ ಸುಭಾಶ್ಚಂದ್ರ ನಾಯಕ್, ಮಕ್ಕಳ ಮಿತ್ರ ರಾಜೇಂದ್ರ ಬಿಜೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದೀಶ್ ದೇವಾಡಿಗ, ಜಯರಾಮ ಶೆಟ್ಟಿ ಬಿಜೂರು, ಸಮಾಜ ಸೇವಕ ಸುಬ್ರಹ್ಮಣ್ಯ ಬಿಜೂರು, ಅಲಕ ಸುರೇಶ್ ಬಿಜೂರು, ನಿವೃತ್ತ ಮುಖ್ಯ ಶಿಕ್ಷಕ ಗಿರೀಶ್ ಶ್ಯಾನುಭಾಗ್, ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವ್ಯವಸ್ಥಾಪಕ ನಾಗರಾಜ ಪಿ. ಯಡ್ತರೆ ಇದ್ದರು. ಮುಖ್ಯ ಶಿಕ್ಷಕ ಮಂಜುನಾಥ ಎಸ್. ಸ್ವಾಗತಿಸಿದರು. ಶಿಕ್ಷಕಿ ಸುಮತಿ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರವಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-28-1034311715

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.