ಬೈಂದೂರು: ‘ಸರ್ಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಜೆಸಿಐ ಸಂಸ್ಥೆಯು ಕೈಗೊಂಡಿರುವ ‘ದಾನ್’ ಕಾರ್ಯಕ್ರಮವು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತವೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಹೇಳಿದರು.

ಜೆಸಿಐ ಬೈಂದೂರು ಸಿಟಿ ಸಂಸ್ಥೆಯ ಪ್ರಮುಖ ಯೋಜನೆಯಾದ ದಾನ್ ಕಾರ್ಯಕ್ರಮದ ಅಡಿಯಲ್ಲಿ ಬೈಂದೂರಿನ ಯೋಜನಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ಹಾಗೂ ಕಲಿಕೋಪಕರಣಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜೆಸಿಐ ಬೈಂದೂರು ಸಿಟಿ ಘಟಕದ ಅಧ್ಯಕ್ಷೆ ಚೈತ್ರಾ ಅವರು ಪುಸ್ತಕ ಮತ್ತು ಕಲಿಕೋಪಕರಣಗಳನ್ನು ಶಾಲೆಯ ಮುಖ್ಯಶಿಕ್ಷಕಿ ಯಶೋದಾ ಅವರಿಗೆ ಹಸ್ತಾಂತರಿಸಿದರು.

ಎಸ್ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಬೈಂದೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷ ಪ್ರೇಮ, ಜೆಸಿಐ ಸ್ಥಾಪಕ ಅಧ್ಯಕ್ಷ ಮಣಿಕಂಠ ದೇವಾಡಿಗ, ಸದಸ್ಯರಾದ ರಾಜು ಮೊಗವೀರ, ಸುರೇಂದ್ರ ಶೇಟ್, ರಾಘವೇಂದ್ರ ಸುರ್ಕೂಂದ, ನಾಗೇಂದ್ರ ಆಚಾರ್ಯ ಯೋಜನಾ ನಗರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-1888755443

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.