ಬೈಂದೂರು: ಯಕ್ಷಗಾನ ಕಲಾರಂಗದ ನೇತೃತ್ವದಲ್ಲಿ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಾನ್ಯ ಎಂ. ಎಂಬುವವರ ಬೈಂದೂರು ತಾಲ್ಲೂಕಿನ ಪಡುವರಿಯಲ್ಲಿ ಪುನರ್ ನವೀಕರಿಸಿದ ಮನೆ ‘ಭಾನು’ ಭಾನುವಾರ ಉದ್ಘಾಟನೆಗೊಂಡಿತು.

ಸತ್ಯಭಾಮ ಮತ್ತು ವೆಂಕಟನರಸಿಂಹ ಉಪಾಧ್ಯಾಯ ನೆನಪಿನಲ್ಲಿ ಅವರ ಪುತ್ರ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಜಿ.ಎಂ. ಕಾರ್ಕಳ ಕಲ್ಮಠದ ದೇವಾನಂದ ಉಪಾಧ್ಯಾಯ ಮತ್ತು ನಮಿತಾ ಉಪಾಧ್ಯಾಯ ದಂಪತಿ ಮನೆಯ ಪ್ರಾಯೋಜಕತ್ವ ವಹಿಸಿದ್ದರು.

ದೇವಾನಂದ ಉಪಾಧ್ಯಾಯ ಉದ್ಘಾಟಿಸಿ ಮಾತನಾಡಿ, ‘ಸಮಾಜದಲ್ಲಿ ಉಳ್ಳವರು ಇಲ್ಲದವರಿಗೆ ಸಹಾಯ ಮಾಡಬೇಕಾದುದು ಕರ್ತವ್ಯ. ಆಗ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ. ಯಕ್ಷಗಾನ ಕಲಾರಂಗ ಮಾಡುವ ಒಳ್ಳೆಯ ಕೆಲಸಕ್ಕೆ ಸಹಕರಿಸಿ ನನ್ನ ಕರ್ತವ್ಯ ನಿರ್ವಹಿಸಿದ್ದೇನೆ’ ಎಂದರು.

ಸಂದೀಪನ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂಜೀತ್ ಪ್ರಕಾಶ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಂದು ಸಂಸ್ಥೆ ಸಾಮಾಜಿಕ, ಸಾಂಸ್ಕೃತಿಕ ಕಳಕಳಿಯಿಂದ ಏನೆಲ್ಲ ಒಳ್ಳೆಯ ಕೆಲಸ ಮಾಡಬಹುದು ಎಂಬುದಕ್ಕೆ ಯಕ್ಷಗಾನ ಕಲಾರಂಗ ಅತ್ಯುತ್ತಮ ಉದಾಹರಣೆ ಎಂದರು.

ಸಂದೀಪನ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿಶ್ವೇಶ್ವರ ಅಡಿಗ, ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಹಾಲಿಂಗ ನಾಯ್ಕ್, ವಕೀಲ ದೇವರಾಜ ಶೆಟ್ಟಿಗಾರ್, ಅಪ್ನಾ ಹಾಲಿಡೇಸ್ನ ಮರವಂತೆ ನಾಗರಾಜ ಹೆಬ್ಬಾರ್, ಸಂಸ್ಥೆಯ ಕೋಶಾಧಿಕಾರಿ ಕೆ. ಸದಾಶಿವ ರಾವ್, ಸದಸ್ಯರಾದ ಯು. ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ, ವಿಜಯಕುಮಾರ್ ಮುದ್ರಾಡಿ, ಭುವನಪ್ರಸಾದ್ ಹೆಗ್ಡೆ, ಅನಂತರಾಜ್ ಉಪಾಧ್ಯಾಯ, ಹಿರಿಯಣ್ಣ ಕಿದಿಯೂರು, ಪ್ರಭಾಕರ ಬಂಡಿ, ಪ್ರಸನ್ನ ಹೆಗಡೆ, ಕೊಲ್ಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗರಾಜ ಭಟ್, ಬೈಂದೂರು ಸರ್ಕಾರಿ ಪ್ರೌಢಶಾಲೆಯ ಅಧ್ಯಾಪಕ ವೃಂದದವರು ಹಾಜರಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಳಿ ಕಡೆಕಾರ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-28-246340706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.