ಮಂಗಳವಾರ, ಜೂನ್ 28, 2022
28 °C

ನೀಟ್‌ ಪರೀಕ್ಷೆ ರದ್ದುಮಾಡಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್‌ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು 2021ನೇ ಸಾಲಿನ ನೀಟ್‌ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ದೇಶ ವ್ಯಾಪಿ ಕೋವಿಡ್‌ 2ನೇ ಅಲೆ ತೀವ್ರವಾಗಿದ್ದು ಯುವ ಜನರ ಮೇಲೆ ಅಪಾಯಕಾರಿ ಪರಿಣಾಮ ಬೀರುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ನೀಟ್‌ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ಅವರು ಪತ್ರ ಬರೆದಿದ್ದಾರೆ.

ನೀಟ್‌ ಪರೀಕ್ಷೆಯ ಬದಲಿಗೆ ಪಿಯುಸಿ ಅಂಕಗಳ ಮೆರಿಟ್‌ ಆಧಾರದಲ್ಲಿ ವೈದ್ಯಕೀಯ ಸೀಟ್‌ಗಳನ್ನು ಹಂಚುವಂತೆ ಸ್ಟಾಲಿನ್‌ ಸಲಹೆ ಕೊಟ್ಟಿದ್ದಾರೆ.

ಈ ಸನ್ನಿವೇಶದಲ್ಲಿ ಯಾವುದೇ ವೃತ್ತಿಪರ ಕೋರ್ಸ್‌ಗಾಗಿ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳನ್ನು ನಡೆಸುವುದು ವಿದ್ಯಾರ್ಥಿಗಳ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಅಪಾಯಕಾರಿಯಾಗಿದೆ ಎಂದು ಸ್ಟಾಲಿನ್‌ ಪತ್ರದಲ್ಲಿ ವಿವರಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು