ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 12ನೇ ತರಗತಿಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಒಟ್ಟಾರೆಯಾಗಿ ಈ ಬಾರಿ ಶೇ 88.78ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿಗಳು ಕ್ರಮ ಸಂಖ್ಯೆ, ಶಾಲೆಯ ಸಂಖ್ಯೆ, ಪರೀಕ್ಷಾ ಕೇಂದ್ರದ ಸಂಖ್ಯೆ ಮತ್ತು ಅಡ್ಮಿಟ್ ಕಾರ್ಡ್ ಐಡಿ ಸಂಖ್ಯೆಯನ್ನು ನಮೂದಿಸುವ ಮೂಲಕ cbse.nic.in. ಜಾಲತಾಣದ ಮೂಲಕ ಫಲಿತಾಂಶ ತಿಳಿಯಬಹುದಾಗಿದೆ.

ಬಾಕಿ ಇರುವ ಪರೀಕ್ಷೆಗಳ ಫಲಿತಾಂಶವನ್ನು ವಿದ್ಯಾರ್ಥಿಗಳು ಈ ಹಿಂದಿನ ಪರೀಕ್ಷೆಗಳಲ್ಲಿ ತೋರಿದ ಸಾಧನೆ ಮತ್ತು ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ ಸಿದ್ಧಪಡಿಸಲಾಗುವುದು ಎಂದು ಜೂನ್ 26ರಂದು ಸುಪ್ರೀಂ ಕೋರ್ಟ್‌ಗೆ ಸಿಬಿಎಸ್‌ಇ ತಿಳಿಸಿತ್ತು. ಪರಿಸ್ಥಿತಿ ಸುಧಾರಿಸಿದ ಬಳಿಕ 12ನೇ ತರಗತಿ ವಿದ್ಯಾರ್ಥಿಗಳಿಗೆ ಬಾಕಿ ಇರುವ ಪರೀಕ್ಷಗೆ ಹಾಜರಾಗಲು ಅವಕಾಶ ಮಾಡಿಕೊಡಲಾಗುವುದು. ಆ ಮೂಲಕ ಅವರು ಅಂಕಗಳನ್ನು ಸುಧಾರಿಸಿಕೊಳ್ಳಬಹುದು ಎಂದು ಈ ಹಿಂದೆಯೇ ಸಿಬಿಎಸ್‌ಇ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.