ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘28,29 ಕ್ಕೆ ಸಿಇಟಿ: ಎಲ್ಲ ಸಿದ್ಧತೆ ಪೂರ್ಣ’

Last Updated 8 ಆಗಸ್ಟ್ 2021, 20:10 IST
ಅಕ್ಷರ ಗಾತ್ರ

ಬೆಂಗಳೂರು: ‘ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ–2021) ಇದೇ 28 ಮತ್ತು 29ರಂದು ನಡೆಯಲಿದೆ. ಕನ್ನಡ ಭಾಷಾ ಪರೀಕ್ಷೆ 30ಕ್ಕೆ ನಡೆಯಲಿದೆ.

‘ಪರೀಕ್ಷೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಮಾರ್ಗಸೂಚಿಯಂತೆ ಪರೀಕ್ಷೆ ನಡೆಸಲಾಗುವುದು. ಸಿಬ್ಬಂದಿಗೆ ಈಗಾಗಲೇ ಆನ್‌ಲೈನ್‌ ತರಬೇತಿ ನೀಡಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಭಾನುವಾರ ತಿಳಿಸಿದರು.

ಎಂಜಿನಿಯರಿಂಗ್‌, ತಂತ್ರಜ್ಞಾನ, ಯೋಗ, ನ್ಯಾಚುರೋಪಥಿ, ಬಿ. ಫಾರ್ಮ, ಎರಡನೇ ವರ್ಷದ ಬಿ. ಫಾರ್ಮ ಮತ್ತು ಫಾರ್ಮ–ಡಿ, ಕೃಷಿ
ವಿಜ್ಞಾನ ಕೋರ್ಸ್‌, ವೆಟನರಿ ಕೋರ್ಸ್‌ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಇಟಿ ನಡೆಸಲಿದೆ.

ಹೊರನಾಡು, ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ ಬರೆಯಬೇಕು. ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪಥಿ ಸೀಟುಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ನೀಟ್‌) ಅರ್ಹತೆ ಪಡೆಯಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT