ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಸಿಇಟಿ ಫಲಿತಾಂಶ ಪ್ರಕಟ: ಸಚಿವ ಅಶ್ವತ್ಥನಾರಾಯಣ

Last Updated 19 ಸೆಪ್ಟೆಂಬರ್ 2021, 6:10 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 ಹಾಗೂ 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ನಾಳೆ (ಸೆ. 20, ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ’ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತಿದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ’ ಎಂದು ಸಚಿವರು ಹೇಳಿದ್ದಾರೆ.

ಫಲಿತಾಂಶವು ಸೋಮವಾರ ಸಂಜೆ 4 ಗಂಟೆ ನಂತರ ಈ ಕೆಳಕಂಡ ಲಿಂಕ್ ನಲ್ಲಿ ಪ್ರಕಟವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

ವೆಬ್‌ಸೈಟ್‌:https://cetonline.karnataka.gov.in/kea

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT