ಬೆಂಗಳೂರು: ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಮೇ 3ರಂದು ನಡೆದಿದ್ದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು (ನೀಟ್) ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರದ್ದು ಮಾಡಿದ್ದರಿಂದ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಸೀಟು ಹಂಚಿಕೆ ವಿಳಂಬ ತಪ್ಪಿಸಲು ರಾಜ್ಯ ಸರ್ಕಾರ ಪ್ರತ್ಯೇಕ ಕೌನ್ಸೆಲಿಂಗ್ ನೀತಿ ರೂಪಿಸಲು ಮುಂದಾಗಿದೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ನಲ್ಲಿ ಮೇ 21ರಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಭಾಗವಹಿಸಲಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವಿವಿಧ ಇಲಾಖೆಯ ಅಧಿಕಾರಿಗಳು, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿ ಶಿಕ್ಷಣ ಶಿಕ್ಷಣ ಸಂಸ್ಥೆಗಳ ಪ್ರಮುಖರು ಹಾಜರಿದ್ದು, ಪ್ರತ್ಯೇಕ ಕೌನ್ಸೆಲಿಂಗ್ ಕುರಿತು ಚರ್ಚೆ ನಡೆಸಲಿದ್ದಾರೆ.

ನೀಟ್ ಫಲಿತಾಂಶದ ಆಧಾರದಲ್ಲಿ ವೈದ್ಯಕೀಯ ಕೌನ್ಸೆಲಿಂಗ್ ಪರಿಷತ್ತು (ಎಂಸಿಸಿ) ದೇಶದಲ್ಲಿ ಲಭ್ಯವಿರುವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಒಟ್ಟು ಸೀಟುಗಳಲ್ಲಿ ಶೇ 15ರಷ್ಟು ಹಂಚಿಕೆ ಮಾಡುತ್ತದೆ. ನೀಟ್ ಅರ್ಹತಾ ಪಟ್ಟಿಯ ಆಧಾರದಲ್ಲೇ ರಾಜ್ಯ ಕೋಟಾದ ಶೇ 85ರಷ್ಟು ವೈದ್ಯಕೀಯ ಸೀಟುಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಂಚಿಕೆ ಮಾಡುತ್ತದೆ. ಮೊದಲ ಸುತ್ತು ಆರಂಭವಾದ ನಂತರವೇ ಸಿಇಟಿ ಸೀಟು ಹಂಚಿಕೆ ನಡೆಯುತ್ತದೆ. ಆದರೆ, ಈ ಬಾರಿ ನೀಟ್ ಮರು ಪರೀಕ್ಷೆ ನಡೆಯುತ್ತಿದ್ದು, ಅಲ್ಲಿಯವರೆಗೂ ಕಾದು ಕುಳಿತರೆ ಸಿಇಟಿ ಬರೆದ ರಾಜ್ಯದ 3.31 ಲಕ್ಷ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-98060643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.