ಚಳ್ಳಕೆರೆ: ‘ಈಗಿನ ಯುವ ಪೀಳಿಗೆಯಲ್ಲಿ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗಿದ್ದು, ಪುಸ್ತಕ ಓದುವ ಸಂಸ್ಕೃತಿ ಅಳಿಸಿ ಹೋಗುತ್ತಿದೆ’ ಎಂದು ಎಚ್ಪಿಪಿಸಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಕೆ. ದೇವಪ್ಪ ಬೇಸರ ವ್ಯಕ್ತಪಡಿಸಿದರು.

ಕಾಲೇಜಿನಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ ಎಂದು ಬಿ.ಆರ್. ಅಂಬೇಡ್ಕರ್ ಹೇಳಿದ್ದಾರೆ. ಅದರಂತೆ ಕನ್ನಡದ ಇತಿಹಾಸ ಮರೆತವನು ಎಂದಿಗೂ ಇತಿಹಾಸ ಸೃಷ್ಟಿಸಲಾರ. ಈಚೆಗೆ ಪರಭಾಷೆಗಳ ಹಾವಳಿಯಲ್ಲಿ ಕನ್ನಡ ಅಳಿದು ಹೋಗುತ್ತಿದೆ. ಕನ್ನಡ ನಾಡು–ನುಡಿ ನವೆಂಬರ್ ತಿಂಗಳಿಗೆ ಸೀಮಿತವಾಗಬಾರದು. ಎಲ್ಲರೂ ಕನ್ನಡದ ಇತಿಹಾಸ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಕನ್ನಡ ಭಾಷೆ ಉಳಿಸುವ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಕೆಲ ಕಾರಣಗಳಿಂದ 6 ತಿಂಗಳು ಯಾವುದೇ ಚಟುವಟಿಕೆ ನಡೆಸಿಲ್ಲ. ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ, ಭಾಷೆಯ ಉಳಿವಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಹೇಳಿದರು.

ಕಸಾಪ ತಾಲ್ಲೂಕು ಘಟಕದ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಜಗನ್ನಾಥ್, ಈರಣ್ಣ, ಮೃತ್ಯುಂಜಯ, ಕನ್ನಡ ರಕ್ಷಣಾ ವೇದಿಕೆಯ ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-44-1586778339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.