ಚಳ್ಳಕೆರೆ: ಡಿ. ಸುಧಾಕರ್ ಅವರು ರಾಜಕೀಯಕ್ಕೆ ಪ್ರವೇಶಿಸಿದ ದಿನದಿಂದ ಇಲ್ಲಿಯವರೆಗೆ ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಲೇ ಬಂದವರು. ಚಳ್ಳಕೆರೆಯ ಎಚ್.ಪಿ.ಪಿ.ಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕ ವಿಜ್ಞಾನ ವಿಷಯ ಪ್ರಾರಂಭಿಸಲು 23 ಗಣಕ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ್ದರು. ಕಾಲೇಜು ಮತ್ತು ನಗರಕ್ಕೆ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಿ ಕ್ರೀಡೆಗೆ ಪ್ರೋತ್ಸಾಹ ನೀಡಿದ್ದರು. ಹೀಗಾಗಿ ಅದಕ್ಕೆ ಅವರ ಹೆಸರನ್ನೇ ಇಡಲಾಗಿದೆ.

2003–2004ರಲ್ಲಿ ಚಳ್ಳಕೆರೆ ಶಾಸಕರಾಗಿದ್ದ ಸಮಯದಲ್ಲಿ ಕುವೆಂಪು ವಿಶ್ವವಿದ್ಯಾಲಯ ದಿಢೀರನೆ ಕಾಲೇಜು ವಿದ್ಯಾರ್ಥಿಗಳ ಶುಲ್ಕವನ್ನು ಹೆಚ್ಚಳ ಮಾಡಿದಾಗ ₹ 2 ಲಕ್ಷ ಮೊತ್ತ ನೀಡಿ ವಿದ್ಯಾರ್ಥಿಗಳಿಗೆ ನೆರವಾಗಿದ್ದರು.

ನಿರಂತರ ಬರಗಾಲಕ್ಕೆ ತುತ್ತಾಗುತ್ತಿದ್ದ ಚಳ್ಳಕೆರೆ ತಾಲ್ಲೂಕಿನ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತಿದ್ದ ಅವರು ಚಳ್ಳಕೆರೆಯ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ, ನಾರಾಯಣಪುರದಲ್ಲಿ ವಿದ್ಯಾಸಂಸ್ಥೆ ಸ್ಥಾಪಿಸಿದ್ದರು.

ಹಿರಿಯೂರು ತಾಲ್ಲೂಕು ಮತ್ತು ನಗರದ ವಾಣಿ ಹಾಗೂ ವೇದಾ ಪ್ರಥಮ ದರ್ಜೆ ಕಾಲೇಜುಗಳ ಉನ್ನತಿಗಾಗಿ ಶ್ರಮಿಸಿದ್ದರು. ಕ್ರಿಯಾಶೀಲ ಹಾಗೂ ಜನರೊಂದಿಗೆ ಸಾಮಾನ್ಯರಂತೆ ಬೆರೆಯುತ್ತಿದ್ದರು ಎಂದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-44-2051836362

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.