ಚಾಮರಾಜನಗರ: ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸದೃಢವಾಗಿಸುವುದು ಸಂವಿಧಾನದ ಆಶಯ ಎಂದು ಸಾಹಿತಿ ಡಾ.ಬಿ.ಆರ್.ಕೃಷ್ಣಕುಮಾರ್ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರಜ್ಞರಲ್ಲಿ ಅಂಬೇಡ್ಕರ್ ಕೂಡ ಒಬ್ಬರಾಗಿದ್ದು, ಸಾಮಾಜಿಕ ನ್ಯಾಯದ ಹರಿಕಾರರಾಗಿ, ಜ್ಞಾನದ ಸಂಕೇತವಾಗಿದ್ದಾರೆ.

ಅಂಬೇಡ್ಕರ್ ಜನ್ಮದಿನವನ್ನು ಭಾರತ ಮಾತ್ರವಲ್ಲದೆ ಜಗತ್ತಿನ ಎಲ್ಲ ದೇಶಗಳಲ್ಲಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಆಚರಿಸಲಾಗುತ್ತದೆ. ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವುದೇ ನಿಜವಾದ ಶಿಕ್ಷಣ, ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಶಿಕ್ಷಣ ಪ್ರಬಲ ಅಸ್ತ್ರವಾಗಿದ್ದು ದೇಶದ ಸಾಮಾಜಿಕ ಬದಲಾವಣೆಗೂ ಕಾರಣವಾಗಲಿದೆ ಎಂದು ಅಂಬೇಡ್ಕರ್ ಬಲವಾಗಿ ನಂಬಿದ್ದರು ಎಂದರು.

ಕಾರ್ಮಿಕರಿಗೆ ಕನಿಷ್ಠ ವೇತನ, ವಿಮಾ ಯೋಜನೆ, ರಜೆ, ಮುಂಬಡ್ತಿ, ಮಹಿಳೆಯರಿಗೆ ಹೆರಿಗೆ ರಜೆ, ಹಿಂದೂ ಕೋಡ್ ಬಿಲ್, ಮಹಿಳೆಯರಿಗೆ ಸಮಾನತೆಯ ಹಕ್ಕು, ಮತದಾನದ ಹಕ್ಕು ಸಹಿತ ಹಲವು ಸೌಲಭ್ಯಗಳನ್ನು ಅಂಬೇಡ್ಕರ್ ನೀಡಿದ್ದಾರೆ. ಯುವಜನತೆ ಅವರ ಆದರ್ಶ ಚಿಂತನೆ, ವಿಚಾರಧಾರೆಗಳನ್ನು ಪಾಲಿಸಬೇಕು ಎಂದು ಕೃಷ್ಣಕುಮಾರ್ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಆರ್.ಎಸ್. ಅಶ್ವಿನಿ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಸಮಾನತೆ, ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳ ಜಾರಿಯ ಮೂಲಕ ಅಸ್ಪೃಶ್ಯತೆಯನ್ನು ತೊಡೆದು ಹಾಕಲು ಜೀವನವನ್ನೇ ಮುಡುಪಿಟ್ಟ ಮಹಾನ್ ವ್ಯಕ್ತಿ ಅಂಬೇಡ್ಕರ್. ರಾಮಾಯಣ, ಮಹಾಭಾರತದ ಕಥೆಗಳಿಗಿಂತ ಸಂವಿಧಾನದ ನೈತಿಕ ಮೌಲ್ಯವುಳ್ಳ ಚಿಂತನೆಗಳು ಇಂದು ಹೆಚ್ಚು ಪ್ರಸ್ತುತ. ಸಂವಿಧಾನದ ಆಶಯಗಳನ್ನು ಅರಿತು ಜ್ಞಾನದ ಹಣತೆ ಹಚ್ಚಬೇಕಿದೆ. ಅವರ ವಿಚಾರಧಾರೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದರು.

ವಕೀಲ ಎನ್.ಮಹೇಂದ್ರ ಮಾತನಾಡಿ ‘ಅಂಬೇಡ್ಕರ್ ಪ್ರತಿದಿನ 18 ತಾಸು ಓದು ಹಾಗೂ ಅಧ್ಯಯನದಲ್ಲಿ ತೊಡಗುತ್ತಿದ್ದರು. ವಿದ್ಯಾರ್ಥಿಗಳು ಓದುವ ಆಸಕ್ತಿ ಬೆಳೆಸಿಕೊಳ್ಳುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು. ದೇಶದ ಎಲ್ಲಾ ಸಮುದಾಯ, ವರ್ಗಗಳ ಉದ್ಧಾರಕ್ಕಾಗಿ ವೈಯಕ್ತಿಕ ಜೀವನವನ್ನೇ ಮುಡಿಪಿಟ್ಟ ಅಂಬೇಡ್ಕರ್ ಸದಾ ಸ್ಮರಣೀಯರು’ ಎಂದರು.

ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ನೀಲಕಂಠಸ್ವಾಮಿ ಮಾತನಾಡಿ, ‘ಅಂಬೇಡ್ಕರ್ ಜಯಂತಿ ಕುಣಿತ, ಆಡಂಬರದ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಅವರ ಕೊಡುಗೆಗಳನ್ನು ಸ್ಮರಿಸುವ ಕೆಲಸವಾಗಬೇಕು. ಮಹಿಳೆಯರ ಸಬಲೀಕರಣ ಸೇರಿದಂತೆ ಸಮಾನತೆಯ ಹಕ್ಕು, ಸ್ಥಾನಮಾನ ನೀಡಿರುವ ಸಂವಿಧಾನದ ಆಶಯಗಳನ್ನು ಅರಿಯಬೇಕು’ ಎಂದು ಹೇಳಿದರು.

ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಶೇಖರ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಮಲ್ಲೇಶ್. ವಾಣಿಜ್ಯ ವಿಭಾಗದ ಮುಖ್ಯಸ್ಥ ಸಿ.ಎನ್. ನಾರಾಯಣ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ನಾಗೇಂದ್ರ ಕುಮಾರ್, ಲೆಕ್ಕ ವ್ಯವಸ್ಥಾಪಕಿ ಶಾಲಿನಿ, ಪತ್ರಾಂಕಿತ ವ್ಯವಸ್ಥಾಪಕಿ ಪೂರ್ಣಿಮಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-37-1049308129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.