ಸಂತೆಮರಹಳ್ಳಿ: ತಳ ಸಮುದಾಯಗಳು ಸಾಮಾಜಿಕ ಹಾಗೂ ರಾಜಕೀಯವಾಗಿ ಸಬಲವಾಗಲು ಸಂವಿಧಾನ ಕಾರಣವಾಗಿದ್ದು ವಿಶ್ವದ ಅತ್ಯುತ್ತಮ ಸಂವಿಧಾನ ರಚಿಕೊಟ್ಟ ಹೆಗ್ಗಳಿಕೆ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದ ಜನರು ಸಮಾನರಾಗಿ ಬದುಕಲು ಸಂವಿಧಾನ ಕಾರಣವಾಗಿದೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ಡಿ.ದೇವರಾಜ್ ಮಾತನಾಡಿ, ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಜಾತಿಗೆ ಸೀಮಿತ ಮಾಡದೆ ಸರ್ವರಿಗೂ ಸಲ್ಲಬೇಕು. ಮಹಿಳೆಯರ ವಿಮೋಚನೆಗೆ ಹೋರಾಡಿದ ಮಹಾನ್ ಚೇತನವಾಗಿರುವ ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.

ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಚಾಮುಲ್ ನಾಮ ನಿರ್ದೇಶಿತ ನಿರ್ದೇಶಕ ಕಮರವಾಡಿ ರೇವಣ್ಣ, ಕುದೇರು ಠಾಣೆ ಪಿಎಸ್ಐ ಈಶ್ವರ್, ಮುಖಂಡ ಮಹದೇವ ಪ್ರಸಾದ್, ವಕೀಲೆ ಪ್ರಭಾವತಿ, ನಂಜುಂಡಸ್ವಾಮಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-37-2049624127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.