ಚಾಮರಾಜನಗರ: ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ತಾಲ್ಲೂಕಿನ ಚೆನ್ನಿಪುರದ ಮೋಳೆ ಹಾಗೂ ವೆಂಕಟಯ್ಯನ ಛತ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಬಾರದು ಎಂದು ಒತ್ತಾಯಿಸಿ ಉಭಯ ಗ್ರಾಮಗಳ ಗ್ರಾಮಸ್ಥರು ಎಐಡಿಎಸ್ಒ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

‘ಬಡ ಕೂಲಿ ಕಾರ್ಮಿಕರ ಮನೆ ಬೆಳಗುವ ಬೆಳಕು, ನಮ್ಮೂರ ಸರ್ಕಾರಿ ಶಾಲೆ’ ‘ನಮ್ಮೂರ ಶಾಲೆ ನಮ್ಮ ಹಕ್ಕು’ ಎಂಬ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸರ್ಕಾರದ ನಿರ್ಧಾರ ಖಂಡಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಸಹ ಸಂಚಾಲಕಿ ಹೇಮಲತಾ ಮಾತನಾಡಿ, ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಚೆನ್ನಿಪುರದ ಮೋಳೆ ಹಾಗೂ ವೆಂಕಟಯ್ಯನ ಛತ್ರ ಸರ್ಕಾರಿ ಶಾಲೆಗಳನ್ನು ಸಮೀಪದ ಸೋಮವಾರಪೇಟೆ ಶಾಲೆಯ ಜೊತೆಗೆ ವಿಲೀನಗೊಳಿಸುತ್ತಿರುವುದು ಖಂಡನೀಯ.

ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಒಂದು ಕಿ.ಮೀ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣ ದೊರೆಯಬೇಕು ಎಂಬ ನಿಯಮವಿದೆ. ಇದಕ್ಕೆ ವಿರುದ್ಧವಾಗಿ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚಿ ಬೇರೆ ಶಾಲೆಗಳೊಂದಿಗೆ ವಿಲೀನ ಮಾಡುತ್ತಿರುವುದು ಖಂಡನೀಯ. ಸರ್ಕಾರದ ಹೊಸ ನಿಯಮ ಸರ್ಕಾರಿ ಶಾಲೆ ಮಕ್ಕಳು ಉನ್ನತ ಶಿಕ್ಷಣದಿಂದ ದೂರ ಉಳಿಯುವಂತೆ ಮಾಡಲಿದೆ. ಬಡವರ ಮಕ್ಕಳು ಬಾಲ ಕಾರ್ಮಿಕರಾಗುವ ಆತಂಕ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವೆಂಕಟಯ್ಯನ ಛತ್ರ ಗ್ರಾಮಸ್ಥ ರಾಜು ಮಾತನಾಡಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಗೊಳಿಸುವ ಬದಲು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿಗೊಳಿಸಬೇಕು. ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ ಗ್ರಾಮಸ್ಥರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಚನ್ನೀಪುರದ ಮೋಳೆ ಗ್ರಾಮಸ್ಥ ಚಿಕ್ಕಮಾದೇವ ಮಾತನಾಡಿ ಗ್ರಾಮದ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸುವ ಶಿಕ್ಷಣ ಇಲಾಖೆಯ ನಿರ್ಧಾರ ಸರಿಯಲ್ಲ. ಕರ್ನಾಟಕ ಪಬ್ಲಿಕ್ ಶಾಲೆ ತೆರೆಯುವ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಾ ಹೋದರೆ ಬಡವರ ಮಕ್ಕಳ ಶಿಕ್ಷಣಕ್ಕೆ ಕುತ್ತು ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಎಐಕೆಕೆಎಂಎಸ್ ರೈತ ಸಂಘಟನೆಯ ಮುಖಂಡ ಬಸವರಾಜು ಮಾತನಾಡಿ ‘ರೈತರು, ಕೂಲಿ ಕಾರ್ಮಿಕರ ಸಮಸ್ಯೆಗಳು ಗಂಭೀರವಾಗುತ್ತಿರುವ ಹೊತ್ತಿನಲ್ಲಿ ಬಡ ಮಕ್ಕಳ ಭವಿಷ್ಯವನ್ನು ಕತ್ತಲೆಗೆ ನೂಕುವ ಸರ್ಕಾರದ ನಿರ್ಧಾರ ಖಂಡನೀಯ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಕೈಬಿಡಬೇಕು, ಇಲ್ಲವಾದರೆ ಪ್ರತಿಭಟನೆ ತೀವ್ರಗೊಳ್ಳಲಿದೆ ಎಂದರು.

ಎಐಡಿಎಸ್ಒ ಜಿಲ್ಲಾ ಸಂಚಾಲಕಿ ಚಂದನ ಯು.ಕೆ, ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಹೇಮಲತಾ, ಬಸವರಾಜು ಎಚ್ಎಂ, ಗ್ರಾಮಸ್ಥರಾದ ಚಿಕ್ಕ ಮಹದೇವ್, ಮಹೇಶ್, ಉಮೇಶ್, ಜಯಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-37-2042805611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.