ಚಾಮರಾಜನಗರ: ಓದಿನಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಲ್ಲಿಸಲಾಗುತ್ತಿದ್ದು ಮುಂದಿನ ಓದಿಗೆ ಪ್ರೇರಣೆಯಾಗಲಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ಹಾರೈಸಿದರು.

ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಶುಕ್ರವಾರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಮಕ್ಕಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸ್ ವೃತ್ತಿಯಲ್ಲಿರುವ ಒತ್ತಡ, ಸವಾಲುಗಳ ಮಧ್ಯೆಯೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಶ್ರಮವೂ ಅಭಿನಂದನೀಯ ಎಂದರು.

ವಿದ್ಯಾರ್ಥಿಗಳು ಆಸಕ್ತಿ ಇರುವ ಕ್ಷೇತ್ರ ಹಾಗೂ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಅಂಕಗಳಿಕೆಯೇ ಯಶಸ್ಸಿನ ಮಾನದಂಡವಲ್ಲ ಎಂದು ಕಿವಿಮಾತು ಹೇಳಿದರು.

ಪೊಲೀಸರು ಕಾರ್ಯದೊತ್ತಡದ ಮಧ್ಯೆ ಕುಟುಂಬಕ್ಕೆ ಸಮಯಾವಕಾಶ ಮೀಸಲಿಡಬೇಕು, ಮಕ್ಕಳ ಉತ್ತಮ ಭವಿಷ್ಯಕ್ಕೆ ಪೂರಕವಾದ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಬಳಿಕ ಡಿಎಆರ್ ಕೇಂದ್ರಸ್ಥಾನದ ಆವರಣದಲ್ಲಿರುವ ಪೊಲೀಸ್ ಭವನದಲ್ಲಿ ಆರಕ್ಷಕರ ಮಕ್ಕಳ ಬೇಸಿಗೆ ಶಿಬಿರಕ್ಕೆ ಎಸ್ಪಿ ಚಾಲನೆ ನೀಡಿ ಮಾತನಾಡಿ ಶಿಬಿರದಲ್ಲಿ ಸಾಂಸ್ಕೃತಿಕ, ಕ್ರೀಡಾ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು ಮಕ್ಕಳು ಉತ್ಸಾಹದಿಂದ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು, ಜ್ಞಾನ ಮತ್ತು ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಎನ್.ಶಶಿಧರ್, ಡಿವೈಎಸ್ಪಿ ಸೋಮಣ್ಣ, ಕಲಾವಿದರಾದ ಕಿರಣ್ ಗಿರ್ಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-37-1712885948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.