ಚಾಮರಾಜನಗರ: ಜನಪದ ಸಾಹಿತ್ಯದ ಓದು ಹಾಗೂ ಭಾಗವಹಿಸುವಿಕೆ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ ಎಂದು ಜಾನಪದ ವಿದ್ವಾಂಸ ಪ್ರೊ.ಕೃಷ್ಣಮೂರ್ತಿ ಹನೂರು ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡಿದ್ದ ‘ವ್ಯಕ್ತಿತ್ವ ನಿರ್ಮಾಣದಲ್ಲಿ ಜನಪದ ಸಾಹಿತ್ಯದ ಪಾತ್ರ’ ವಿಷಯದ ಕುರಿತು ಉಪನ್ಯಾಸ ನೀಡಿದ ಅವರು, ಶತಮಾನಗಳಿಂದಲೂ ಜನಪದರು ಕಂಡು ಅನುಭವಿಸಿದ್ದನ್ನು ಪದಗಳನ್ನು ಕಟ್ಟಿ ಹಾಡುವುದರ ಮೂಲಕ ಅಭಿವ್ಯಕ್ತಿಗೊಳಿಸುತ್ತಾ ಬಂದಿದ್ದಾರೆ.

ಜನಪದರ ಭಾವನೆಗಳು, ಸಂವೇದನೆಗಳು ತ್ರಿಪದಿ, ಲಾವಣಿ, ಸೋಬಾನೆ ಪದ, ಬೀಸುವ ಪದಗಳಾಗಿ ಮೂಡಿಬಂದಿವೆ. ಕಥೆಗಳು, ಜನಪದ, ಪುರಾಣ, ಆಚರಣೆ ಹಾಗೂ ಸಂಪ್ರದಾಯಗಳನ್ನು ಅಭಿವ್ಯಕ್ತಿಗೊಳಿಸುತ್ತಾ ಬಂದಿದ್ದಾರೆ. ಜನಪದ ಸಾಹಿತ್ಯ ಸಂಬಂಧಗಳನ್ನು ಬೆಸೆಯುವ, ಸಾಮಾಜಿಕ ಸಾಮರಸ್ಯ ಬಿತ್ತುವ, ಮಾನವೀಯ ಮೌಲ್ಯಗಳನ್ನು ತುಂಬುವ, ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಗುಣವನ್ನು ಒಳಗೊಂಡಿದೆ ಎಂದರು.

ಬದುಕಿನಲ್ಲಿ ಸಕಾರಾತ್ಮಕ ವಿಚಾರಗಳತ್ತ ಸೆಳೆಯುವ ಶಕ್ತಿಯನ್ನು ಜಾನಪದ ಒಳಗೊಂಡಿದೆ. ಈ ಹಿನ್ನೆಲೆಯಲ್ಲಿ ಜನಪದ ತ್ರಿಪದಿಗಳು, ಮಹಾಕಾವ್ಯಗಳು, ಕಥೆಗಳು ಮತ್ತು ಜನಪದ ಆಟಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ವಿದ್ವಾಂಸರು ಸಂಶೋಧನೆ ನಡೆಸಿದ್ದಾರೆ. ವಿಶ್ವವಿದ್ಯಾನಿಲಯಗಳಲ್ಲಿ ಪಠ್ಯಕ್ರಮವಾಗಿಯೂ ಅಳವಡಿಕೆಯಾಗಿದೆ. ಜಾನಪದ ಸಾಹಿತ್ಯವೇ ಬಯಲು ವಿಶ್ವವಿದ್ಯಾಲಯವಿದ್ದಂತೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥೆ ಕೃಪಾ ಎಸ್, ವಿದ್ಯಾರ್ಥಿಗಳು ಜಾನಪದ ಸಾಹಿತ್ಯವನ್ನು ಓದಿ ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಲ್ಳಬೇಕು. ಜನಪದ ಸಾಹಿತ್ಯ ಕುರಿತಾದ ವಿಶೇಷ ಉಪನ್ಯಾಸ, ಕಾರ್ಯಾಗಾರ, ವಿಚಾರಗೋಷ್ಠಿಗಳು ನಿರಂತರವಾಗಿ ನಡೆಯಬೇಕು ಎಂದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಮಹದೇವಸ್ವಾಮಿ, ಯುವಜನತೆ ಆಧುನಿಕತೆಯ ಮೋಹಕ್ಕೆ ಸಿಲುಕಿ ಗ್ರಾಮಗಳಲ್ಲಿ ನಡೆಯುವ ಗ್ರಾಮ್ಯ ಆಚರಣೆಗಳನ್ನು ಮರೆಯುತ್ತಿದ್ದಾರೆ. ಜನಪದರ ಆಹಾರ ಕ್ರಮಗಳಿಂದ ದೂರವಾಗುತ್ತಿದ್ದಾರೆ. ಜನಪದದಲ್ಲಿ ವೈಜ್ಞಾನಿಕ ಪದ್ಧತಿ ಮತ್ತು ವೈಚಾರಿಕ ಚಿಂತನೆಗಳು ಅಡಗಿದ್ದು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು, ಜಾನಪದ ಸಂಸ್ಕೃತಿಯನ್ನು ಉಳಿಸುವ ಮತ್ತು ಗ್ರಾಮೀಣ ಸೊಗಡುಗಳನ್ನು ಕಾಪಾಡಿಕೊಳ್ಳಬೇಕಾದ ತುರ್ತು ಎದುರಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಲಿಖಿತಾ ಅನುರಾಧ, ಕನ್ನಡ ವಿಭಾಗದ ಅಧ್ಯಾಪಕರಾ ಮೇಘೇಶ್, ಸೌಮ್ಯ ಬಿ.ಆರ್, ಬಸವಣ್ಣ ಎಂ.ಎಸ್, ವಿನೋದ್, ರಮೇಶ್ ಹಾಗೂ ವಿದ್ಯಾರ್ಥಿನಿಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-37-912019997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.