ಚಾಮರಾಜನಗರ: ಅಕ್ಷರ ಫೌಂಡೇಷನ್ ಬೆಂಗಳೂರು ವತಿಯಿಂದ ಡಯಟ್ ಸಂಸ್ಥೆಯ ಸಹಯೋಗದಲ್ಲಿ ಈಚೆಗೆ ಗಣಿತ ಕಲಿಕಾ ಆಂದೋಲನ ವಿಚಾರ ಸಂಕಿರಣ ನಡೆಯಿತು.

ಕಾರ್ಯಕ್ರಮದಲ್ಲಿ ಡಿಡಿಪಿಐ ಚಂದ್ರಪಾಟೀಲ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಘಟಿತ ಶ್ರಮ ಅಗತ್ಯ. ಶಿಕ್ಷಕರು ಪ್ರತಿ ವಿದ್ಯಾರ್ಥಿಯ ಮೇಲೆ ಗಮನ ಕೇಂದ್ರೀಕರಿಸಿ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಅಕ್ಷರ ಫೌಂಡೇಷನ್ನ ರಂಗನಾಥ್ ಪಲ್ಲೇದ್ ಮಾತನಾಡಿ ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಫೌಂಡೇಷನ್ ಶ್ರಮಿಸುತ್ತಿದೆ. ಕಳೆದ ವರ್ಷ ಜಿಲ್ಲಾ ಪಂಚಾಯಿತಿ ಸಿಇಒ ನೇತೃತ್ವದಲ್ಲಿ ಜಿಲ್ಲೆಯ ಮುಖ್ಯ ಶಿಕ್ಷಕರು ಹಾಗೂ ಸಿಆರ್ಪಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವರ್ಷವೂ ಮುಮದುವರಿಸಲಾಗುವುದು ಎಂದು ತಿಳಿಸಿದರು.

ಪ್ರಭಾರ ಪ್ರಾಂಶುಪಾಲ ವಿ.ನಾಗರಾಜ ಮಾತನಾಡಿದರು. ಜಿಲ್ಲಾ ಸಂಯೋಜಕ ಕುಮಾರ್ ಉಪಸ್ಥಿತರಿದ್ದರು. ಅಕ್ಷರ ಫೌಂಡೇಷನ್ ಸ್ಪರ್ಧೆಯ ಸಮೀಕ್ಷಾ ವಿವರವನ್ನು ಪ್ರದರ್ಶಿಸಲಾಯಿತು. ಜಿಲ್ಲೆಯ 25 ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಿಆರ್ಪಿಗಳು ಭಾಗವಹಿಸಿದ್ದರು. ಜಿಲ್ಲಾ ಜಿಕೆಎ ನೋಡೆಲ್ ಅಧಿಕಾರಿ ಅರಸಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-37-2016690700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.