ಗುಂಡ್ಲುಪೇಟೆ: ಪಟ್ಟಣದ ಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಸೈಬರ್ ಅಪರಾಧಗಳು ಹಾಗೂ ಬೆಂಕಿ ಅವಘಡಗಳ ಕುರಿತಂತೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಚಾಮರಾಜನಗರ ವಿಶ್ವವಿದ್ಯಾಲಯದ ನೋಡಲ್ ಅಧಿಕಾರಿ ಹಜೀರಾ ನಸ್ರೀನ್ ಉದ್ಘಾಟಿಸಿದರು. ನಂತರ ಮಾತನಾಡಿ, ಇತ್ತೀಚಿಗೆ ಯುವಜನತೆಯಲ್ಲಿ ಮೊಬೈಲ್ ಫೋನ್ ಗೀಳು ಹೆಚ್ಚಾಗಿದೆ. ಅತಿಯಾದ ಮೊಬೈಲ್ ಬಳಕೆಯಿಂದ ಖಿನ್ನತೆ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಆದ್ದರಿಂದ ಅತಿಯಾದ ಬಳಕೆ ಬೇಡ ಎಂದು ಸಲಹೆ ನೀಡಿದರು.

ಅಪರಾಧ ವಿಭಾಗ ಎಸ್ಐ ಅಬ್ದುಲ್ ಖಾದರ್ ಮಾತನಾಡಿ, ಕಂಪ್ಯೂಟರ್ ಹಾಗೂ ಡಿಜಿಟಲ್ ಸಾಧನಗಳನ್ನು ಬಳಸಿ ಹಣಕಾಸಿನ ವಂಚನೆ, ಸಾಮಾಜಿಕ ಜಾಲತಾಣ ದುರ್ಬಳಕೆ ಸೇರಿದಂತೆ ಅನೇಕ ವಿಧಗಳಲ್ಲಿ ವಂಚನೆ ನಡೆಯುತ್ತವೆ. ಹಾಗಾಗಿ ಅಪರಿಚಿತ ಸಂಪರ್ಕ (ಲಿಂಕ್) ಗಳನ್ನು ಸುಖಾಸುಮ್ಮನೆ ಒತ್ತುವ ಮೂಲಕ ಖದೀಮರಿಗೆ ನೆರವಾಗುವಂತೆ ಮಾಡಬಾರದು. ಬ್ಯಾಂಕ್ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಒಟಿಪಿಯನ್ನು ಅನಾಮಧೇಯ ಕರೆ ಮಾಡುವ ವ್ಯಕ್ತಿಗಳಿಗೆ ನೀಡಬಾರದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಲ್ಲುಸ್ವಾಮಿ ಎನ್ ಗಂಜಾಂ, ಬಸವರಾಜು, ಜೀವಿತಾ ಸೇರಿದಂತೆ ಅಧ್ಯಾಪಕರು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು, ಅಗ್ನಿ ಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-37-1800794700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.