ಚಾಮರಾಜನಗರ: ಮೈಸೂರಿನ ಜೆಎಸ್ಎಸ್ ಮಹಾ ವಿದ್ಯಾಪೀಠ ಕೊಡಮಾಡುವ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ಪತ್ರಕರ್ತ ಪ್ರಕಾಶ್ ಬೆಲ್ಲದ್ ಆಯ್ಕೆಯಾಗಿದ್ದಾರೆ.

ಗಡಿಭಾಗದ ತಾಳವಾಡಿ ತಾಲ್ಲೂಕಿನ ಸೊತ್ತನಪುರಂ ಗ್ರಾಮದ ಪ್ರಕಾಶ್ ಬೆಲ್ಲದ್ 30 ವರ್ಷಗಳ ಕಾಲ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದು ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿದ್ಯಾಪೀಠ ತಿಳಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಮೇ 5ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆಯಲಿದೆ. ಪತ್ರಕರ್ತ ಸಿ.ಕೆ.ಮಹೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಎನ್.ಸಿದ್ದಲಿಂಗಸ್ವಾಮಿ ಅಧ್ಯಕ್ಷತೆ ವಹಿಸುವರು. ಜೆಎಸ್ಎಸ್ ಮಹಾವಿದ್ಯಾಪೀಠದ ತೋಟಗಾರಿಕೆ ವಿಭಾಗದ ನಿರ್ದೇಶಕ ಎನ್.ಎಂ.ಶಿವಶಂಕರಪ್ಪ ಭಾಗವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-37-1933033907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.