ಸಂತೇಮರಹಳ್ಳಿ: ಇಲ್ಲಿನ ಜೆಎಸ್ಎಸ್ ವಿದ್ಯಾಸಂಸ್ಥೆಯಲ್ಲಿ ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸೋಮವಾರ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.

ಪ್ರೌಢಶಾಲಾ ಮುಖ್ಯಶಿಕ್ಷಕ ಎ.ಜಿ.ಮರಿಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ಧೈರ್ಯದಿಂದ ಶಾಲೆಗೆ ಹಾಜರಾಗಬೇಕು. ರಜಾ ದಿನಗಳಿಂದ ಹೊರಬಂದು ಶಾಲೆಗೆ ತಪ್ಪದೇ ಹಾಜರಾಗಬೇಕು. ಶಿಕ್ಷಣದಿಂದ ಮಾತ್ರ ವ್ಯಕ್ತಿಯ ಅಭಿವೃದ್ಧಿ ಸಾದ್ಯ ಎಂಬುದನ್ನು ತಿಳಿದುಕೊಂಡು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ಹರಿಸಬೇಕು’ ಎಂದು ತಿಳಿಸಿದರು.

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವೈ.ಪಿ.ವಿಶ್ವ ಮಾತನಾಡಿ, ‘ಶಾಲೆಗೆ ದಾಖಲಾದ ಹೊಸ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನದೊಂದಿಗೆ ಶಾಲೆಯ ವಾತಾವರಣಕ್ಕೆ ಹೊಂದಿಕೊಂಡು ಪಾಠಗಳ ಕಡೆಗೆ ಗಮನ ಹರಿಸಬೇಕು. ಗುರುಗಳ ಆಶೀರ್ವಾದದೊಂದಿಗೆ ಸನ್ಮಾರ್ಗದಲ್ಲಿ ನಡೆಯಬೇಕು’ ಎಂದು ತಿಳಿಸಿದರು.

ಶಿಕ್ಷಕರಾದ ಶೇಖರ್, ಲೋಕಮಣಿ, ದೀಪಿಕಾ, ಕಾಂತರಾಜು, ಮಲ್ಲಿಕಾರ್ಜುನ್ ಹಾಗೂ ಪೋಷಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-37-29266647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.