ಚಾಮರಾಜನಗರ: ‘ನೀಟ್-ಯುಜಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಕೇಂದ್ರ ಸರ್ಕಾರದ ಬೇಜವಾಬ್ದಾರಿತನಕ್ಕೆ ಸಾಕ್ಷಿ’ ಎಂದು ಕೆಆರ್ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ರವಿಕುಮಾರ್ ಖಂಡಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಬಹಿರಂಗ ಪರೀಕ್ಷೆಯ ವೈಫಲ್ಯ ಮಾತ್ರವಲ್ಲ, ದೇಶದ ಲಕ್ಷಾಂತರ ಬಡ, ಮಧ್ಯಮ ವರ್ಗದ ಮತ್ತು ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಗೆ ಮಾಡಿದ ಅನ್ಯಾಯವಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಭ್ರಷ್ಟಾಚಾರದ ಕೇಂದ್ರವಾಗಿ ಮಾರ್ಪಟ್ಟಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದರೂ ಕೇಂದ್ರ ಸರ್ಕಾರ ಸಂಸ್ಥೆಯ ಬೆನ್ನಿಗೆ ನಿಂತಿರುವುದು ನಾಚಿಕೆಗೇಡಿನ ಪರಮಾವಧಿ’ ಎಂದು ದೂರಿದ್ದಾರೆ.

‘ಪ್ರಶ್ನೆ ಪತ್ರಿಕೆ ಸೋರಿಕೆ, ಕೋಚಿಂಗ್ ಸೆಂಟರ್ಗಳ ದಲ್ಲಾಳಿಗಳು ಹಾಗೂ ಭ್ರಷ್ಟ ಅಧಿಕಾರಿಗಳ ಕೂಟ ಸೇರಿಕೊಂಡು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಹರಾಜಿಗೆ ಇಟ್ಟಿವೆ. ಹಣವಿದ್ದವರಿಗೆ ಮಾತ್ರ ವೈದ್ಯಕೀಯ ಸೀಟು ಎಂಬ ವಾತಾವರಣ ನಿರ್ಮಿಸಿ, ಸಾಮಾಜಿಕ ನ್ಯಾಯವನ್ನು ಬುಡಮೇಲು ಮಾಡಲಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-37-159957922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.