ಸಂತೇಮರಹಳ್ಳಿ: ಸಮೀಪದ ಗೂಳಿಪುರ ಗ್ರಾಮದ ವಿ.ಮಹಾಂತ ದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ 2004ನೇ ಸಾಲಿನಿಂದ 2008ನೇ ಸಾಲಿನವರೆಗೆ ವ್ಯಾಸಾಂಗ ಮಾಡಿದ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ನಿವೃತ್ತ ಮುಖ್ಯಶಿಕ್ಷಕ ರೇವಣ್ಣಸ್ವಾಮಿ ಮಾತನಾಡಿ, ‘ಗುರುಗಳ ಮಾರ್ಗದರ್ಶನ ವಿದ್ಯಾರ್ಥಿಗಳ ಗುರಿ ಸಾಧನೆಗೆ ಪೂರಕವಾಗಿರುತ್ತದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು ಬೌದ್ಧಿಕ ಚಿಂತನೆ ಹಾಗೂ ಉತ್ತಮ ಅಲೋಚನೆಗಳಿಗೆ ದಾರಿ ದೀಪವಾಗುತ್ತದೆ’ ಎಂದರು.

ಶಿಕ್ಷಕ ಎನ್.ನಾಗೇಶ್ ಮಾತನಾಡಿ, ‘ಸ್ನೇಹ ಸಮ್ಮಿಲನದ ಹೆಸರಿನಲ್ಲಿ ಗೆಳೆಯರೆಲ್ಲ ಒಂದೆಡೆ ಸೇರಿರುವುದು ಹಬ್ಬದ ಸಂಭ್ರಮದಂತೆ ಕಾಣುತ್ತಿದೆ. ಈಚೆಗೆ ಸಂಸ್ಕಾರ ಕಡಿಮೆಯಗುತ್ತಿದ್ದು ವಿದ್ಯಾರ್ಥಿಗಳಿಗೆ ಮೌಲ್ಯಧಾರಿತ ಶಿಕ್ಷಣ ಅಗತ್ಯವಿದೆ’ ಎಂದರು.

‘ಬದುಕಿನಲ್ಲಿ ಕಷ್ಟ–ಸುಖಗಳನ್ನು ಸಮನಾಗಿ ಸ್ವೀಕರಿಸಿ ಸ್ನೇಹಿತರ ಕಷ್ಟಗಳಿಗೆ ಸ್ಪಂದಿಸಿದಾಗ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಾರ್ಥಕವಾಗುತ್ತದೆ. ಹಳೆಯ ವಿದ್ಯಾರ್ಥಿಗಳು ಸಂಘ ರಚನೆ ಮಾಡಿಕೊಂಡು ಗುರು ಹಿರಿಯರ ಮಾರ್ಗದರ್ಶನದಲ್ಲಿ ಶಾಲೆಯ ಅಭಿವೃದ್ಧಿಗೆ ಹಾಗೂ ಸಮಾಜಮುಖಿ ಕೆಲಸಗಳಲ್ಲಿ ಮುಂದಾಗಬೇಕು’ ಎಂದು ಸಲಹೆ ನೀಡಿದರು.

ಈ ಸಂದರ್ಭ ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಕಳೆದ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಗುರುಗಳಾದ ಅಂಕಯ್ಯ, ನಾಗೇಶ್, ಜಾಯ್ಸ್ ಮಲ್ಲಮ್ಮ, ಸುಂದ್ರೇಶ್, ಅಂಕಶೆಟ್ಟಿ, ರುದ್ರಾಂಬಿಕಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-37-408021421

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.