ಚಾಮರಾಜನಗರದ: ‘ಶಿಕ್ಷಣ ಇಲಾಖೆಯು ನಿಗದಿಪಡಿಸಿದ್ದಕ್ಕಿಂತ ಹಲವು ಪಟ್ಟು ಶುಲ್ಕವನ್ನು ನಗರದ ರಾಮಸಮುದ್ರದಲ್ಲಿರುವ ಸೇಂಟ್ ಫ್ರಾನ್ಸಿಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪಡೆಯುತ್ತಿದ್ದು, ಪ್ರಶ್ನಿಸಿದರೆ ಪ್ರಾಂಶುಪಾಲ ಪ್ರಭಾಕರ್ ಉಡಾಫೆಯಿಂದ ಉತ್ತರಿಸುತ್ತಾರೆ’ ಎಂದು ಹಲವರು ಪೋಷಕರು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಲ್ಲಿ ಶುಕ್ರವಾರ ದೂರಿದರು.

ಶುಕ್ರವಾರ ಕೆಡಿಪಿ ಸಭೆಗೆ ಬಂದ ಸಚಿವರನ್ನು ಭೇಟಿಮಾಡಿದ ಪೋಷಕರಾದ ಬಸವರಾಜ್, ರಾಜೇಶ್, ಅಶೋಕ್, ಲೋಕನಾಥ್, ಶ್ರೀನಾಥ್, ‘ಶಾಲೆಯ ಆಡಳಿತ ಮಂಡಳಿಯ ನಿಲುವುಗಳಿಂದ ಬೇಸತ್ತಿದ್ದೇವೆ. ಡೊನೇಷನ್, ದಾಖಲಾತಿ ಶುಲ್ಕ, ಕಂಪ್ಯೂಟರ್ ಶುಲ್ಕ ಸೇರಿ ಇತರೆ ಶುಲ್ಕಗಳ ಹೆಸರಿನಲ್ಲಿ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ’ ಎಂದು ದೂರಿದರು.

‘ಪುಸ್ತಕ, ಯೂನಿಫಾರಂಗಳನ್ನು ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಖರೀದಿಸಲು ಅವಕಾಶ ನೀಡದೆ, ದುಬಾರಿ ಬೆಲೆಗೆ ಶಾಲೆಯಲ್ಲೇ ಮಾರಾಟ ಮಾಡಲಾಗುತ್ತಿದೆ. ಹಣಕ್ಕೆ ಅಧಿಕೃತ ರಶೀದಿಯನ್ನೂ ನೀಡುತ್ತಿಲ್ಲ’ ಎಂದು ಆರೋಪಿಸಿದರು.

‘ಹೆಚ್ಚುವರಿ ಶುಲ್ಕ ಪಾವತಿಸಲು ನಿರಾಕರಿಸುವ ಪೋಷಕರ ಮಕ್ಕಳಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಈ ಬಗ್ಗೆ ಕಳೆದ ವರ್ಷ ಜಿಲ್ಲಾಡಳಿತಕ್ಕೆ ಹಲವು ಪೋಷಕರು ಲಿಖಿತವಾಗಿ ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ. ಹಲವು ಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿದರು.

‘ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಗೂ ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ‘ಪೋಷಕರು ನೀಡಿರುವ ದೂರನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-37-1135123057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.