ಚಾಮರಾಜನಗರ: ವಿದ್ಯಾರ್ಥಿಗಳು ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದು ಲಕ್ನೋ ಬಾಬಾಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಹನುಮಯ್ಯ ಸಲಹೆ ನೀಡಿದರು.

ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಈಚೆಗೆ ವಿವಿಯ ತೃತೀಯ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶೋಷಿತ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು ನೀಡಿದೆ. ಸಂವಿಧಾನದಡಿ ದೊರೆತ ಅವಕಾಶ ಬಳಸಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಬದುಕು ರೂಪಿಸಿಕೊಂಡಿದ್ದಾರೆ ಎಂದರು.

ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಮಾತನಾಡಿ, ಮೂರು ವರ್ಷಗಳ ಹಿಂದೆ ಆರಂಭವಾದ ವಿವಿಯು ಗಡಿ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟಿದೆ. ನೂರಾರು ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದು ವಿವಿಗೆ ಕೀರ್ತಿ ತಂದಿದ್ದಾರೆ. ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೂ ವಿವಿ ಆದ್ಯತೆ ನೀಡಿದೆ ಎಂದರು.

ಚಾಮರಾಜನಗರ ವಿವಿ ಕುಲಸಚಿವ (ಮೌಲ್ಯಮಾಪನ) ಪ್ರೊ.ಕೆ.ಎಂ.ಮಹಾದೇವನ್, ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ.ಎಚ್.ಕೃಷ್ಣರಾಮ್, ವಿವಿ ಸಿಂಡಿಕೇಟ್ ಸದಸ್ಯ ಪುಟ್ಟಸ್ವಾಮಿ, ಡೀನ್ ಡಾ.ಕೆ.ಸಿ.ಬಸವಣ್ಣ, ವಿಶ್ರಾಂತ ಹಣಕಾಸು ಅಧಿಕಾರಿ ನಾಗೇಶ್, ಪ್ರೊ.ದಿವ್ಯಾ, ಹಾಜಿರಾ, ಕಾಮಿಲ, ಶ್ವೇತಾ, ಕ್ರೀಡಾ ಸಮಿತಿ ಸದಸ್ಯ ಜಿ.ಬಂಗಾರು, ಪ್ರಮೋದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ.ಆರ್.ಎಸ್.ಅಶ್ವಿನಿ ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-37-1564985524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.