ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನಿಂದ ವಿದ್ಯಾರ್ಥಿಗಳಿಗೆ ಪಿಎಚ್ಡಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು ವಿದ್ಯಾರ್ಥಿ ವೇತನವೂ ದೊರೆಯುತ್ತದೆ ಎಂದು ವಿವಿ ಕುಲಸಚಿವ ಪ್ರೊ.ಕೆ.ಎಂ.ಮಹಾದೇವನ್ ಹೇಳಿದರು.

ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು ಪಿಎಚ್ಡಿ ಪಡೆಯಲು ಅವಕಾಶವಿದ್ದು ಸಂಶೋಧನಾ ಅವಧಿಯಲ್ಲಿ ವಿದ್ಯಾರ್ಥಿ ವೇತನವೂ ದೊರಯಲಿದೆ, ಈ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳು ಪಿಎಚ್ಡಿಗೆ ನೋಂದಾಯಿಸಿಕೊಳ್ಳಬಹುದು ಎಂದರು.

ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಜನಪದ ಗಾಯನ, ಭಕ್ತಿಗೀತೆ, ದೇಶಭಕ್ತಿ ಗೀತೆ, ವಚನ ಗಾಯನ ಸಹಿತ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿರುವುದು ಅಭಿನಂದನೀಯ. ಪಠ್ಯ ಮಾತ್ರವೇ ಕಲಿಕೆಯಾಗಬಾರದು, ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಅಗತ್ಯ. ವಿದ್ಯಾರ್ಥಿಗಳು ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಮೈಸೂರಿನಲ್ಲಿ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯವಿದ್ದು ವಿವಿಧ ಸಂಗೀತ ಪ್ರಕಾರಗಳ ವಿಷಯಗಳನ್ನು ಅಧ್ಯಯನ ಮಾಡಬಹುದು. ಕಲೆಗಳಲ್ಲಿ ಪದವಿ ಪಡೆದು ಉದ್ಯೋಗವನ್ನೂ ಗಿಟ್ಟಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಜಿಲ್ಲೆ ಜಾನಪದ ಕಲೆಗಳ ತವರೂರಾಗಿದ್ದು,, ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಲೆ ಮಹದೇಶ್ವರ, ಬಿಳಿಗಿರಿ ರಂಗನಾಥಸ್ವಾಮಿ ನೆಡೆದಾಡಿದ ಪುಣ್ಯ ನೆಲವಾಗಿದೆ. ಜಿಲ್ಲೆಯಲ್ಲಿ ಜನಪದ ವಿಶ್ವ ವಿದ್ಯಾಲಯದ ಕೊರತೆಯಿದ್ದು, ಸ್ಥಾಪನೆಗೆ ಜನರು ಹಾಗೂ ಕಲಾವಿದರು ಸಂಘಟಿತವಾಗಿ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಜೆಎಸ್ಎಸ್ ಬಿಇಡಿ ಕಾಲೇಜು ಪ್ರಾಂಶುಪಾಲ ಡಾ.ಕೆ.ಸಿ.ಬಸವಣ್ಣ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ಪ್ರಮುಖ ಘಟ್ಟವಾಗಿದ್ದು, ಉತ್ತಮ ವ್ಯಾಸಂಗ ಮಾಡಿ ಉದ್ಯೋಗ ಪಡೆಯಬೇಕು. ವಿದ್ಯಾರ್ಥಿಗಳು ಪದವಿ ಪಡೆಯುವುದಕ್ಕೆ ಸೀಮತವಾಗದೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು, ಜ್ಞಾನ, ಕೌಶಲ ಬೆಳೆಸಿಕೊಂಡರೆ ಯಶಸ್ಸು ಗಳಿಸಬಹುದು ಎಂದು ಸಲಹೆ ನೀಡಿದರು.

ಅಂತರ ರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಚೈತ್ರಾ ಮಾತನಾಡಿ ‘ವಿದ್ಯಾರ್ಥಿಗಳು ಕ್ರೀಡಾ ಪ್ರತಿಭೆಯನ್ನು ಒರೆಗೆ ಹಚ್ಚಿ ಸಾಧನೆ ಮಾಡಬೇಕು, ಶಿಕ್ಷಣ ಮಾತ್ರವಲ್ಲದೆ ಕ್ರೀಡೆಗಳಲ್ಲೂ ಉತ್ತಮ ಸಾಧನೆ ತೋರಿದರೆ ಉದ್ಯೋಗಾವಕಾಶಗಳು ದೊರೆಯುತ್ತವೆ. ಆಸಕ್ತಿಯಿರುವ ಕ್ರೀಡೆಯಲ್ಲಿ ಶ್ರಮವಹಿಸಿ ಸಾಧನೆ ಮಾಡಿದರೆ ಸಮಾಜದಲ್ಲಿ ಗೌರವ, ಖ್ಯಾತಿ ಹಾಗೂ ಉದ್ಯೋಗವೂ ದೊರೆಯುತ್ತದೆ ಎಂದರು.

ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ದತ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಟಿ.ಎಂ.ಮರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದೇವರಾಜ ಮೂರ್ತಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಜಮುನಾ, ಗಣಿತ ವಿಭಾಗದ ಮುಖ್ಯಸ್ಥೆ ಅರುಣಾಶ್ರೀ, ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅನುಶ್ರೀ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-37-578399085

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.