ಚಾಮರಾಜನಗರ: ‘ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಪಿಸಿದೆ’ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2025-26ನೇ ಸಾಲಿನ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ಕ್ರಾಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

‘ಚಾಮರಾಜನಗರ ಪಟ್ಟಣದಲ್ಲಿ ಒಂಬತ್ತು ವರ್ಷಗಳ ಹಿಂದೆ ಆರಂಭವಾದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 30 ವಿದ್ಯಾರ್ಥಿನಿಯರು ಮಾತ್ರ ದಾಖಲಾಗಿದ್ದರು. ಪ್ರಸ್ತುತ ಕಾಲೇಜು ಶೈಕ್ಷಣಿಕವಾಗಿ ಬೆಳೆದಿದ್ದು, ವರ್ಷದಿಂದ ವರ್ಷಕ್ಕೆ ಮಹಿಳಾ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಾಗುತ್ತಿದೆ. 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಅತಿಹೆಚ್ಚಿನ ಮಹಿಳಾ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದು ಮಹಿಳಾ ವಿದ್ಯಾರ್ಥಿಗಳ, ಮಹಿಳೆಯರ ಅಭಿ ವೃದ್ಧಿಯ ಮಾನದಂಡ ಹಾಗೂ ಆರೋಗ್ಯಕರ ಬೆಳವಣಿಗೆಯನ್ನು ಸೂಚಿಸುತ್ತದೆ’ ಎಂದರು.

‘ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಾಗಲೂ ಚಾಮರಾನಗರ ಹೆಸರು ಇರುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಪರಿಣಾಮ ಜಿಲ್ಲೆಯಲ್ಲಿ ಅಭಿವೃದ್ಧಿಯ ಬದಲಾವಣೆ ಗಾಳಿ ಬೀಸಿದೆ. ಪಾಲಿಟೆಕ್ನಿಕ್, ವೈದ್ಯಕೀಯ, ಎಂಜಿನಿಯರಿಂಗ್, ಕಾನೂನು, ಕೃಷಿ, ಕ್ರೀಡೆ, ವಸತಿಯುತ ಕಾಲೇಜುಗಳು, ಕಿತ್ತೂರು ಚೆನ್ನಮ್ಮ, ಮೊರಾರ್ಜಿ ಶಾಲೆಗಳ ಸ್ಥಾಪನೆಯಾಗಿದ್ದು ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ’ ಎಂದು ಶಾಸಕರು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎಸ್.ಮಹದೇವಸ್ವಾಮಿ ಮಾತನಾಡಿ, ‘ಈ ಬಾರಿ ಕಾಲೇಜಿಗೆ ಹೆಚ್ಚಿನ ಮಹಿಳಾ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಮುಂದಿನ ದಿನಗಳಲ್ಲಿ ದಾಖಲಾತಿ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ನೂತನ ಕಾಲೇಜು ಕಟ್ಟಡಕ್ಕೆ 18 ಹೆಚ್ಚುವರಿ ಕೊಠಡಿಗಳ ಅವಶ್ಯವಿದ್ದು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳ ನಿರ್ಮಾಣಕ್ಕೆ ಕಾಲೇಜಿನ ಅಭಿವೃದ್ದಿ ಸಮಿತಿ ಅಧ್ಯಕ್ಷರು ಹಾಗೂ ಶಾಸಕರು ಸಿ.ಎಸ್.ಆರ್ ನಿಧಿಯಡಿ ಹೆಚ್ಚಿನ ಅನುದಾನ ನೀಡಬೇಕು’ ಎಂದು ಮನವಿ ಮಾಡಿದರು.

ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಟಿ.ಎನ್.ಶಾಂತರಾಜು ಮಾತನಾಡಿದರು. 2025-26ನೇ ಸಾಲಿನ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ಕ್ರಾಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆಗೈದ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಮರಣಿಕೆ, ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯ ಕಾಗಲವಾಡಿ ಚಂದ್ರು, ಚಿಕ್ಕಮಹದೇವು, ಸಮೀವುಲ್ಲಾ, ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಚಾಲಕ ಸಿ.ಶೈಲೇಶ್ ಕುಮಾರ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಂಚಾಲಕ ಎಸ್.ಆರ್.ದೀಪಾ, ದೈಹಿಕ ಶಿಕ್ಷಣ ನಿರ್ದೇಶಕ ಶಾಂತರಾಜು, ರೆಡ್ ಕ್ರಾಸ್ ಸಮಿತಿ ಸಂಚಾಲಕ ಆರ್.ಪ್ರಸಾದ್, ರೇಂಜರ್ಸ್ ಮತ್ತು ರೋವರ್ಸ್ ಸಂಚಾಲಕ ಎಸ್.ಕೃಪಾ, ಐ.ಕ್ಯೂ.ಎ.ಸಿ. ಸಂಚಾಲಕ ಲಿಖಿತ ಎಸ್. ಅನುರಾಧ, ಪತ್ರಾಂಕಿತ ವ್ಯವಸ್ಥಾಪಕ ಜಿ.ಎನ್. ಸಾಕಮ್ಮ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಎಚ್.ಎಂ.ಅಂಜಲಿ ಹಾಗೂ ಇತರರುಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-37-639972093

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.