ಹಿರೇಮಳಲಿ(ಚನ್ನಗಿರಿ): ‘ಬಡ ವರ್ಗದ ಮಕ್ಕಳು ಆರ್ಥಿಕ ಸಮಸ್ಯೆಯಿಂದಾಗಿ ಉತ್ತಮ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಿಂದ ವಿಶೇಷ ಬೇಸಿಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪಿಡಿಒ ರಶ್ಮಿ ತಿಳಿಸಿದರು.

ತಾಲ್ಲೂಕಿನ ಹಿರೇಮಳಲಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅರಿವು ಕೇಂದ್ರದಿಂದ ಶುಕ್ರವಾರ ನಡೆದ ವಿಶೇಷ ಬೇಸಿಗೆ ಉಚಿತ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಶಾಲೆಗಳಿಗೆ ರಜೆ ಇದ್ದು, ಈ ಸಮಯದಲ್ಲಿ ವಿದ್ಯಾರ್ಥಿಗಳು ಮನೆಗಳಲ್ಲೇ ವ್ಯರ್ಥವಾಗಿ ಕಾಲ ಕಳೆಯುತ್ತಾರೆ. ಇಂತಹ ಬಡ ವರ್ಗದ ವಿದ್ಯಾರ್ಥಿಗಳಿಗೆ ಶಿಬಿರದಲ್ಲಿ ಕಂಪ್ಯೂಟರ್, ಕಲೆ, ಕ್ರೀಡೆಗಳ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಸುಕನ್ಯಾ ನಾಗರಾಜ್, ಎಂ.ವಿ. ರಮೇಶ್, ವಿಜಯ್ ನಾಯ್ಕ, ರೆಹಮತ್, ಗ್ರಂಥಪಾಲಕ ಸಾಗರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-43-241253257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.