ಚನ್ನಪಟ್ಟಣ: ‘ನಮ್ಮೂರ ಸರ್ಕಾರಿ ಶಾಲೆ ಉಳಿಯಲಿ’ ಘೋಷಣೆಯೊಂದಿಗೆ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಮಹಾತ್ಮ ಜ್ಯೋತಿಬಾಫುಲೆ ಅವರ ದ್ವಿಶತಮಾನೋತ್ಸವ ಅಂಗವಾಗಿ ತಾಲ್ಲೂಕಿನ ಹೊಡಿಕೆಹೊಸಹಳ್ಳಿ ಮತ್ತು ನಾಯಕನತಾಂಡಾದಲ್ಲಿ ಈಚೆಗೆ ಒಂದು ದಿನದ ಮಕ್ಕಳ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಬಡ ಮಕ್ಕಳ ಶಿಕ್ಷಣದ ಹಕ್ಕು ಮತ್ತು ಸಾರ್ವಜನಿಕ ಶಿಕ್ಷಣ ಕಾಪಾಡುವಲ್ಲಿ ಸರ್ಕಾರಿ ಶಾಲೆಗಳ ಪಾತ್ರ ಹಾಗೂ ವಿದ್ಯಾರ್ಥಿಗಳು, ಪೋಷಕರ ಹೋರಾಟದ ಬಗ್ಗೆ ಮಕ್ಕಳು ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸಲಾಯಿತು. ಭಾರತದ ಶಿಕ್ಷಣ ಕ್ರಾಂತಿ ಪಿತಾಮಹ ಮಹಾತ್ಮ ಜ್ಯೋತಿಬಾ ಫುಲೆ ಅವರ ಜೀವನ ಮತ್ತು ಹೋರಾಟ ಮಕ್ಕಳಿಗೆ ಪರಿಚಯಿಸಲಾಯಿತು. ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಶಿಬಿರದಲ್ಲಿ ಮಕ್ಕಳು ಶಿಕ್ಷಣದ ಮಹತ್ವ ಸಾರುವ ಹಾಡುಗಳನ್ನು ಮಕ್ಕಳು ಹಾಡಿದರು. ಸಾಮಾಜಿಕ ವಿಷಯಗಳ ಕುರಿತು ಕಿರು ನಾಟಕ ಪ್ರದರ್ಶಿಸಿದರು. ಶಿಬಿರದಲ್ಲಿ ಸಂಘನೆ ರಾಜ್ಯ ಸೆಕ್ರೆಟರಿಯಟ್ ಸದಸ್ಯರಾದ ನವಾಜ್, ಕಿರಣ್, ಜಿಲ್ಲಾ ಸಂಚಾಲಕ ರೋಹಿತ್, ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-14-1430080402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.