ಚನ್ನಪಟ್ಟಣ: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಸೋಮವಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಪ್ರಾಂಶುಪಾಲ ಎಚ್.ರಾಮಯ್ಯ, ಶಿಕ್ಷಣ ಬದುಕಿನ ಅಡಿಪಾಯ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪಾಠದ ಜತೆಗೆ ಮೌಲ್ಯಾಧಾರಿತ ಶಿಕ್ಷಣ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜು ಅಭಿವೃದ್ಧಿ ಸಮಿತಿ ಖಜಾಂಚಿ ಎ.ಕಾಂತರಾಜ ಮಾತನಾಡಿ, ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯ ನೀಡಿದೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗಪಡಿಸಿಕೊಂಡು ಶಿಕ್ಷಣದಲ್ಲಿ ಉನ್ನತ ಸ್ಥಾನ ಗಳಿಸಬೇಕು ಎಂದು ಸಲಹೆ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಪುಟ್ಟಸ್ವಾಮಿಗೌಡ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಜಿ.ಎನ್.ಪುಟ್ಟರಾಜು, ಡಿ.ಎಂ.ಚಂದ್ರಶೇಖರ್, ಕಾಲೇಜು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಿ.ಟಿ.ಮಹೇಶ ಜನಪದ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕಿ ಕೆ.ಆರ್.ಇಂದ್ರಮ್ಮ ನಿರೂಪಿಸಿದರು. ಎನ್.ನಿರ್ಮಲಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-14-533077889

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.