ಚನ್ನರಾಯಪಟ್ಟಣ:‘ಗುರುಗಳ ಸಾನ್ನಿಧ್ಯದಿಂದ ಉತ್ತಮ ಮಾರ್ಗದಲ್ಲಿ ಸಾಗಬೇಕು. ಉತ್ತಮ ನಡತೆ ಮತ್ತು ಜ್ಞಾನ ವೃದ್ಧಿಸಿಕೊಂಡು ಪರಿಶ್ರಮ, ನಿರಂತರ ಪ್ರಯತ್ನದಿಂದ ಗುರುಗಳನ್ನು ಮೀರಿಸುವಂಥ ಸಾಧನೆ ಮಾಡಬೇಕು. ವಿದ್ಯೆಗೆ ವಿನಯವೇ ಭೂಷಣ. ನಮ್ಮ ಗುಣ, ನಡತೆಯಿಂದ ಸಮಾಜದಲ್ಲಿ ಗೌರವ ಲಭಿಸುತ್ತದೆ. ಬದುಕಿನ ಪಯಣ ಚೆನ್ನಾಗಿರುತ್ತದೆ’ ಎಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಬಿ.ಆರ್.ಯುವರಾಜ ಹೇಳಿದರು.

ಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ಇರುವ ಬಾಂಧವ್ಯ ಪವಿತ್ರವಾದುದು’ ಎಂದರು.

ಕಾಲೇಜು ಪ್ರಾಂಶುಪಾಲ ಎಂ.ಕೆ. ಮಂಜುನಾಥ ಮಾತನಾಡಿ, ‘ಪದವಿ ಹಂತದ ಶಿಕ್ಷಣ ಬದುಕನ್ನು ರೂಪಿಸಿಕೊಳ್ಳುವ ಆತ್ಮವಿಶ್ವಾಸ ವೃದ್ಧಿಸುತ್ತದೆ. ಇದರ ಜತೆಗೆ ಜೀವನ ರೂಪಿಸಿಕೊಳ್ಳಲು ಜ್ಞಾನ ಸಹ ಮುಖ್ಯವಾದುದು. ಬದುಕಿನಲ್ಲಿ ಕೀರ್ತಿ, ಹಣ, ಯಶಸು ಬೇಕು. ಸಂಸ್ಕಾರ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಅಂತಃಕರಣ ಇರಬೇಕು. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗುವ ಮೂಲಕ ಸಮಾಜಕ್ಕೆ ಆಸ್ತಿ ಎನ್ನಿಸಿಕೊಳ್ಳಬೇಕು. ಜೀವನದುದ್ದಕ್ಕೂ ಕಲಿಕೆ ನಿರಂತರವಾದದು. ಪ್ರಾಮಾಣಿಕವಾಗಿ ಕೆಲಸಮಾಡುವ ತುಡಿತ ಇರಬೇಕು. ಜೀವನದಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದರು.

ವಿದ್ಯಾರ್ಥಿಗಳಾದ ಲಕ್ಷ್ಮೀ, ಮಧುಕಿರಣ್, ಧನುಶ್ ಮತ್ತು ಲಾವಣ್ಯಾ ಮಾತನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಎ.ಎನ್. ಶ್ರೀಧರ್, ಸಹಾಯಕ ಪ್ರಾಧ್ಯಾಪಕ ಎನ್. ನರಸಿಂಹಮೂರ್ತಿ, ದೈಹಿಕ ಶಿಕ್ಷಣ ನಿರ್ದೇಶಕ ಜೆ. ಭಾಸ್ಕರ ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಅಜಯ್, ಹಾಡಿನ ಮೂಲಕ ರಂಜಿಸಿದರೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-36-743584757

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.