ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 14 ಕೇಂದ್ರಗಳಲ್ಲಿ ಏ.23 ಮತ್ತು 24ರಂದು ಯುಜಿ ಸಿಇಟಿ ಪರೀಕ್ಷೆ ನಡೆಯಲಿದೆ. ಒಟ್ಟು 7,360 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

23ರ ಗುರುವಾರ ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನ ವಿಜ್ಞಾನ ಮತ್ತು 24ರ ಶುಕ್ರವಾರ ಬೆಳಿಗ್ಗೆ 10.30ರಿಂದ 11.50ರವರೆಗೆ ಗಣಿತ, ಮಧ್ಯಾಹ್ನ 2.30ರಿಂದ 3.50ರವರೆಗೆ ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

ಚಿಕ್ಕಬಳ್ಳಾಪುರದ ಶಾಂತಿನಿಕೇತನ ಪದವಿ ಪೂರ್ವ ಕಾಲೇಜು, ಎಸ್ಜೆಸಿಐಟಿ ಕಾಲೇಜು, ನ್ಯೂಟನ್ ಇಂಟರ್ಗ್ರೆಟೆಡ್ ಪದವಿ ಪೂರ್ವ ಕಾಲೇಜು, ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಪಿಯು ಕಾಲೇಜು ಬ್ಲಾಕ್ 1 ಮತ್ತು ಎರಡು, ಬಿಜಿಎಸ್ ವರ್ಲ್ಡ್ ಸ್ಕೂಲ್, ಬಿಜಿಎಸ್ ಸೈನ್ಸ್ ಅಕಾಡೆಮಿ, ಬಿಜಿಎಸ್ ಇಂಗ್ಲಿಷ್ ಶಾಲೆ, ಮಹಿಳಾ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ್ ಬಾಲಕಿಯರ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್ಬಿಜಿಎನ್ಎಸ್ ಕಾಲೇಜು, ಶ್ರೀಕೃಷ್ಣ, ರುಕ್ಮಿಣಿ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ.

ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್ ಸೆಂಟರ್ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಪರೀಕ್ಷಾರ್ಥಿಗಳಿಗೆ ಆಸನ ವ್ಯವಸ್ಥೆ, ಗಾಳಿ, ಬೆಳಕು, ಕುಡಿಯುವ ನೀರು, ಶೌಚಾಲಯ ಇನ್ನಿತರೆ ಮೂಲ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-16-837842055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.