ಚಿಕ್ಕಬಳ್ಳಾಪುರ: ಕನ್ನಡಿಗರಿಗೆ ಕನ್ನಡದ ಬಗೆಗಿನ ಅಭಿಮಾನ ಕೊರತೆ ಎದ್ದು ಕಾಣುತ್ತಿದೆ. ಪರಭಾಷೆಗಳ ಮೇಲಿರುವ ಔದಾರ್ಯವೂ ಮಾತೃಭಾಷೆಗೆ ಕಂಟಕವಾಗಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ.ರವಿ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಾಂತಿನಿಕೇತನ್ ಪದವಿ ಪೂರ್ವ ಕಾಲೇಜಿನ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿಗೆ ತನ್ನದೇ ಆದ ವಿಶಿಷ್ಟ ಪರಂಪರೆ ಇದೆ. ಕನ್ನಡಕ್ಕೆ ಇರುವ ಶ್ರೀಮಂತಿಕೆ ಜಗತ್ತಿನ ಇತರೆ ಭಾಷೆಗಿಲ್ಲ. ಕನ್ನಡ ಸಾಹಿತ್ಯದಲ್ಲಿರುವ ಜನಪದ ಸಾಹಿತ್ಯ, ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯನ ಮೌಲ್ಯಗಳು ಶ್ರೇಷ್ಠವಾಗಿವೆ ಎಂದರು.

ಮಾತೃಭಾಷೆಯನ್ನು ಉದಾಸೀನ ವಾಗಿ ಕಾಣಬಾರದು. ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಅಂತಿಮವಾಗಿ ನಮ್ಮ ರಕ್ಷಣೆಗೆ ನಿಲ್ಲುವುದಿಲ್ಲ. ನಮ್ಮಲ್ಲಿರುವ ಜ್ಞಾನವೇ ಕೈ ಹಿಡಿಯುತ್ತದೆ. ತಂತ್ರಜ್ಞಾನವನ್ನು ಸಾರಾಸಗಟಾಗಿ ತಿರಸ್ಕರಿಸಬೇಕು ಎಂದಿಲ್ಲ. ಬದಲಿಗೆ ಇತಿಮಿತಿಗಳೊಳಗೆ ಎಷ್ಟು ಅಗತ್ಯವೋ ಅಷ್ಟನ್ನು ಮಾತ್ರ ಬಳಸಿ ಮಾತೃಭಾಷೆಯ ಮೂಲಕ ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಾಜದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಬೇಕಾದರೂ ಮಾತೃಭಾಷೆ ಆಧಾರಿತ ಶಿಕ್ಷಣದ ಅಡಿಪಾಯ ಅತಿಮುಖ್ಯ. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು ಸಾಕಷ್ಟು ಜನ ಉನ್ನತ ಅಧಿಕಾರದ ಹುದ್ದೆಗಳಲ್ಲಿ ಇದ್ದಾರೆ. ಕನ್ನಡದ ಬೆಳವಣಿಗೆ ದೃಷ್ಟಿಯಿಂದ ನಾವು ಸ್ವಾಭಿಮಾನಿಗಳಾಗಿ ಹೆಚ್ಚು ಕೊಡುಗೆ ನೀಡಬೇಕಿದೆ ಎಂದರು.

ಇಂದಿನ ವಿದ್ಯಾರ್ಥಿಗಳ ಕನ್ನಡ ಭಾಷಾ ಪ್ರೌಢಿಮೆ ಆತಂಕ ಉಂಟು ಮಾಡುತ್ತದೆ. ಅವರು ಬರೆಯುವ ಬರಹದಲ್ಲಿ ಸಾಕಷ್ಟು ಕಾಗುಣಿತ ದೋಷಗಳು ಕಾಣುತ್ತವೆ. ವ್ಯಾಕರಣದ ಪ್ರಾಥಮಿಕ ಜ್ಞಾನ ಇರುವುದಿಲ್ಲ ಎಂದರು.

ಅನೇಕ ಪ್ರಾಂತ್ಯಗಳಾಗಿ ಹರಿದು ಹಂಚಿ ಹೋಗಿದ್ದ ಕನ್ನಡದ ನೆಲವನ್ನು ಅಖಂಡ ಕರ್ನಾಟಕವಾಗಿ ಏಕೀಕರಣಗೊಳಿಸಿದ ಕೀರ್ತಿಯ ಸಿಂಹಪಾಲು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ತನ್ನ 112 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡಿದೆ. 112 ವರ್ಷಗಳಲ್ಲಿ ಸಾವಿರಾರು ಗ್ರಂಥಗಳನ್ನು ಪ್ರಕಟಿಸುವ ಮೂಲಕ ಜನರಲ್ಲಿ ಓದುವ ಅಭಿರುಚಿ ಬೆಳೆಸಿ ಸಾಹಿತ್ಯಾಸಕ್ತಿಯನ್ನು ಹೆಚ್ಚಿಸಿದೆ ಎಂದು ಹೇಳಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಕೋಡಿ ರಂಗಪ್ಪ ಮಾತನಾಡಿ, ‘ಶಿಕ್ಷಣ, ಸಾಹಿತ್ಯ ಮತ್ತು ಮಾಧ್ಯಮ ಪರಸ್ಪರ ಸಹಕಾರದೊಂದಿಗೆ ಒಂದಾಗಿ ಕೆಲಸ ಮಾಡಿದಲ್ಲಿ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಹೆಚ್ಚಾಗಿ ನೀಡಬಹುದು. ಆ ಮೂಲಕ ಸಮಾಜವನ್ನು ಸಾಕಷ್ಟು ಸುಧಾರಿಸಲು ಅವಕಾಶವಿದೆ ಎಂದು ಹೇಳಿದರು.

ಭುವನೇಶ್ವರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ.ವಿಶ್ವೇಶ್ವರಯ್ಯ ಮತ್ತು ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಸ್ಮರಿಸಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಪ್ರಬಂಧ ರಚನೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶಾಂತಿನಿಕೇತನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಮಾರ್ ವಿ.ಎನ್., ಡಿಎಚ್ಒ ಡಾ.ಎಸ್.ಎಸ್. ಮಹೇಶ್ ಕುಮಾರ್, ಡಿಡಿಪಿಐ ರಮೇಶ್, ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜ್, ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಬಾಹುಬಲಿ, ಮಂಚನಬಲೆ ಶ್ರೀನಿವಾಸ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-16-23098446

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.