ಚಿಕ್ಕಬಳ್ಳಾಪುರ: ಕ್ರೀಡಾ ಇಲಾಖೆಯು 2026-27 ನೇ ಸಾಲಿನಲ್ಲಿ ಕ್ರೀಡಾ ವಸತಿ ಶಾಲೆ, ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶಾವಕಾಶ ಕಲ್ಪಿಸುತ್ತದೆ. ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ.

ಆದರೆ ಸದರಿ ಆಯ್ಕೆ ಪ್ರಕ್ರಿಯೆಗಳಲ್ಲಿ ವಿವಿಧ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ದೃಷ್ಟಿಯಿಂದ ರಾಜ್ಯದ ಕೆಲವು ಸ್ಥಳಗಳಲ್ಲಿ ವಿಶೇಷ ಆಯ್ಕೆ ಪ್ರಕ್ರಿಯೆಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಈ ವಿಶೇಷ ಆಯ್ಕೆ ಪ್ರಕ್ರಿಯೆ ಎರಡು ಹಂತದಲ್ಲಿ ನಡೆಯುತ್ತದೆ.6, 8 ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 8ನೇ ತರಗತಿ ಪ್ರವೇಶಕ್ಕೆ ಜೂ.2026 ಕ್ಕೆ ಅನ್ವಯ ಆಗುವಂತೆ 14 ವರ್ಷ ವಯಸ್ಸಿನ ಒಳಗೆ ಇರಬೇಕು. ಕ್ರೀಡಾ ಇಲಾಖೆ, ಜಿಲ್ಲಾ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. 7204737892 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-16-876220362

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.