ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತಾಲ್ಲೂಕಿನ ಬೊಂಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಚ್ಚಲು ನಿರ್ಧರಿಸಲಾಗಿದ್ದು, ಇದನ್ನು ಖಂಡಿಸಿ ಎಐಡಿಎಸ್ಒ ನೇತೃತ್ವದಲ್ಲಿ ಶನಿವಾರ ಶಾಲೆಯ ಎದುರು ಪ್ರತಿಭಟನೆ ನಡೆಸಲಾಯಿತು.

ಎಐಡಿಎಸ್ಒ ಜಿಲ್ಲಾ ಸಂಘಟನಾ ಕಾರ ಅಭಿಷೇಕ್ ಮಾತನಾಡಿ, ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40 ಸಾವಿರ ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಮುಂದಾಗಿದೆ. ಹಾಗಾಗಿ ಇಲ್ಲಿನ ಮಕ್ಕಳು ಮೈಲಿ–ಮನೆಗೆ ಹೋಗಿ ಓದಬೇಕು. ಹಿಂದೆಂದೂ ತಮ್ಮ ಊರಿನಲ್ಲಿ ಬಸ್ಗಳನ್ನೇ ನೋಡದ ಈ ಮಕ್ಕಳು ಹೇಗೆ 7 ಕಿ.ಮೀ ಹೋಗಿ ಓದಲು ಸಾಧ್ಯ ಎಂದು ಪ್ರಶ್ನಿಸಿ ಈ ಶಾಲೆ ವಿಲೀನ ಮಾಡಲಾಗುತ್ತದೆ ಎಂದು ಹೇಳುತ್ತಿರುವುದು ಬಹಳ ಖಂಡನೀಯ ಎಂದರು.

ಸರ್ಕಾರ ವ್ಯವಸ್ಥಿತವಾಗಿ ಶಿಕ್ಷಣವನ್ನು ಬಡವರ, ಕೂಲಿ ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಕಸಿಯುವ ಹುನ್ನಾರ ಮಾಡುತ್ತಿದೆ. ಶಿಕ್ಷಣ ಸಚಿವರು ನಮ್ಮ ರಕ್ತದಲ್ಲಿ ಕನ್ನಡವಿದೆ ಒಂದೇ ಒಂದು ಸರ್ಕಾರಿ ಶಾಲೆಯನ್ನು ಕೂಡ ಮುಚ್ಚುವುದಿಲ್ಲ ಎಂದು ಸದನದಲ್ಲಿ ಹೇಳಿ ಹಿಂದೆನಿಂದ ಆದೇಶವನ್ನು ಹೊರಡಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಎಂದು ದೂರಿದರು.

ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರ ನಡೆಸಿವೆ. ಈ ಎಂಟು ವರ್ಷಗಳಲ್ಲಿ ಮೂರುವರೆ ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದಾರೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ನಡೆಸದೆ ಖಾಸಗಿ ಶಾಲೆಗಳ ಪರ ಕೆಲಸ ಮಾಡಿದ್ದಾರೆ. 60 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇವೆ. 21 ಸಾವಿರಕ್ಕೂ ಹೆಚ್ಚಿಗೆ ಕೊಠಡಿಗಳು ದುರಸ್ತಿಯಾಗಿಲ್ಲ. ಇನ್ನೂ ಹಲವಾರು ಸಮಸ್ಯೆಗಳು ಸರ್ಕಾರಿ ಶಾಲೆ ಗಳಲ್ಲಿ ಇವೆ. ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು ಎಂದು ಆಗ್ರಹಿಸಿದರು.

ಗ್ರಾಮಸ್ಥರಾದ ಹರೀಶ್ ಮಾತನಾಡಿ, ಈ ಶಾಲೆ ಇತ್ತೀಚಿಗೆ ತಾನೇ ತನ್ನ ಬೆಳ್ಳಿ ಮಹೋತ್ಸವ ಆಚರಿಸಿಕೊಂಡಿದೆ. ಎಲ್ಲವೂ ಚೆನ್ನಾಗಿ ನಡೆಯುತ್ತಿದೆ. ಇನ್ನು ಮುಂದೆಯೂ ಇದು ಇಲ್ಲಿಯೇ ಉಳಿಯಬೇಕು. ಹಾಗಾಗಿ ಯಾವುದೇ ಕಾರಣಕ್ಕೂ ನಾವು ಈ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. ಸರ್ಕಾರಿ ಶಾಲೆ ಇದ್ದರೆ ಮಾತ್ರ ಬಡವರಿಗೆ ಶಿಕ್ಷಣ. ಯಾವ ಕಠಿಣ ಸಂದರ್ಭದಲ್ಲಿ ಈ ಶಾಲೆ ಮುಚ್ಚಲು ನಾವು ಬಿಟ್ಟಿಲ್ಲ. ಈ ಬಾರಿಯೂ ಕೂಡ ಬಿಡುವುದಿಲ್ಲ. ಈ ಶಾಲೆಯನ್ನು ಉಳಿಸಲು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಒ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಗ್ರಾಮಸ್ಥರಾದ ಹರೀಶ , ಲಕ್ಷ್ಮಣ, ನೀಲ, ರತ್ನ, ಮಂಜುನಾಥ್, ಅಶೋಕ್, ರೇಣುಕಾ, ಪ್ರೇಮ, ಇಂದಿರಾ, ಧರ್ಮೇಂದ್ರ, ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-126-1662130017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.