ಸೂಸಲವಾನಿ (ನರಸಿಂಹರಾಜಪುರ): ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ನೀಡಿದ್ದು, ಅವರ ಆಶಯದಂತೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವತ್ತ ಗಮನಹರಿಸಬೇಕು ಎಂದು ಡಿಎಸ್ಎಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಮಂಜುನಾಥ್ ಹೇಳಿದರು.

ತಾಲ್ಲೂಕಿನ ಸೂಸಲವಾನಿ ಗ್ರಾಮದಲ್ಲಿ ಈಚೆಗೆ ನಡೆದ ತಾಲ್ಲೂಕು ಮಟ್ಟದ ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಬಿ.ಆರ್. ಅಂಬೇಡ್ಕರ್ ಅವರು ಕಷ್ಟ ಬಂದರೂ ಶಿಕ್ಷಣವನ್ನು ಬಿಡಲಿಲ್ಲ. ಅದೇ ರೀತಿ ಏನೇ ಕಷ್ಟ ಬಂದರೂ ಮಕ್ಕಳಿಗೆ ಉನ್ನತ ಮಟ್ಟದಲ್ಲಿ ಶಿಕ್ಷಣ ನೀಡಬೇಕು. ಪರಿಶಿಷ್ಟ ಜಾತಿಯವರಿಗೆ ಸರ್ಕಾರದಿಂದ ಹಲವಾರು ಯೋಜನೆಗಳಿದ್ದು, ಅದನ್ನು ಬಳಸಿಕೊಳ್ಳಬೇಕು. ದಲಿತರಲ್ಲಿ ಹಲವರು ಇಂದಿಗೂ ಶೋಷಣೆಗೆ ಒಳಗಾಗಿದ್ದಾರೆ. ಅವರನ್ನು ಹೊರ ತರಬೇಕು ಎಂದರು.

ಡಿಎಸ್ಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ ದೇವರಾಜ್ ಮಾತನಾಡಿ, ಅಂಬೇಡ್ಕರ್ ಅವರ ಸಾಧನೆಗೆ ಜಗತ್ತೇ ತಲೆಬಾಗಿದೆ. ಪ್ರಪಂಚದಲ್ಲಿ ಅತಿ ಹೆಚ್ಚು ಪದವಿ ಪಡೆದಿರುವ ವಿಶ್ವದ ಮೊದಲ ವ್ಯಕ್ತಿ. ಅವರು ಸಂವಿಧಾನವನ್ನು ರಚಿಸಿ ಕೋಟ್ಯಂತರ ಜನರ ಜೀವನ ಬದಲಾಯಿಸಿದ ಮಹಾನ್ ಶಿಲ್ಪಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಡಿಎಸ್ಎಸ್ ಜಿಲ್ಲಾ ಘಟಕದ ಸಂಘಟನಾ ಸಂಚಾಲಕ ಡಿ. ರಾಮು ಮಾತನಾಡಿ, ಅಂಬೇಡ್ಕರ್ ಅವರು ಎಲ್ಲರಿಗೂ ಸಮಪಾಲು ಸಮ ಬಾಳು ಎಂದು ಘೋಷಿಸಿದವರು. ನಮ್ಮ ಜನರು ಇನ್ನೂ ಶೋಷಣೆಗೆ ಒಳಗಾಗಿದ್ದಾರೆ. ನಮಗೆ ಸಿಗಬೇಕಾದ ಹಕ್ಕುಗಳು ಇನ್ನೂ ಸಿಗುತ್ತಿಲ್ಲ. ನಮ್ಮ ಜನರಿಗೆ ಹಕ್ಕು ಪತ್ರ ಜಾತಿ ಪ್ರಮಾಣ ಪತ್ರ ಸಿಗುತ್ತಿಲ್ಲ. ಸೂಸಲವಾನಿ ಗ್ರಾಮದಲ್ಲಿ ರಸ್ತೆ ಸಮಸ್ಯೆಯಿದೆ. ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ತಾಲ್ಲೂಕು ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ದಲಿತ ಸಂಘರ್ಷ ಸಮಿತಿಯ ಸದಸ್ಯರುಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-126-1723061697

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.