ಚಿಕ್ಕಮಗಳೂರು: ಶೇ 50ರಷ್ಟು ಶಿಕ್ಷಕರ ಕೊರತೆ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಪಡೆದಿದೆ. ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಆಗ್ರಹಿಸಿದರು.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿರುವುದಕ್ಕೆ ಸರ್ಕಾರಿ ಶಾಲೆ ಶಿಕ್ಷಕರ ಆಸಕ್ತಿ ಮತ್ತು ಶ್ರಮ ಕಾರಣ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಬೇಕು. ವಿದ್ಯಾಭ್ಯಾಸಕ್ಕೆ ಬೇಕಾಗುವ ಮೂಲ ಸೌಲಭ್ಯ, ಉತ್ತಮ ಶೌಚಾಲಯ, ಉಪಕರಣ, ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ಪಠ್ಯಪುಸ್ತಕ ನೀಡಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಶೇ 50ರಷ್ಟು ಶಿಕ್ಷಕರಿಲ್ಲ ಎಂದರೇ ಗುಣಮಟ್ಟದ ಶಿಕ್ಷಣ ನೀಡಲು ಹೇಗೆ ಸಾಧ್ಯ. ತಿಂಗಳು ಕಳೆದರೂ ಪಠ್ಯಪುಸ್ತಕ ಬಂದಿಲ್ಲ ಎಂದರೇ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲಿ 89 ಸರ್ಕಾರಿ ಶಾಲೆಗಳಲ್ಲಿ ಶೇ 100 ಫಲಿತಾಂಶ ಬಂದಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ 1,340 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿವೆ. 12,913 ಉಪನ್ಯಾಸಕರ ಹುದ್ದೆಗಳಿದ್ದು, 7644 ಉಪನ್ಯಾಸಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 5,269 ಉಪನ್ಯಾಸಕರ ಕೊರತೆ ಇದೆ. ಉಪನ್ಯಾಸಕರ ಕೊರತೆ ನಡುವೆ ಸರ್ಕಾರಿ ಜೂನಿಯರ್ ಕಾಲೇಜುಗಳು ಉಳಿಯಲು ಹೇಗೆ ಸಾಧ್ಯ. ಹೋಬಳಿ ಮಟ್ಟದಲ್ಲಿನ ಸರ್ಕಾರಿ ಜೂನಿಯರ್ ಕಾಲೇಜುಗಳನ್ನು ಹಂತ– ಹಂತವಾಗಿ ಮುಚ್ಚುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಸರ್ಕಾರಿ ಶಾಲೆ ಶಿಕ್ಷಕರು ಮತ್ತು ಉಪನ್ಯಾಸಕರನ್ನು ವಿವಿಧ ಕೆಲಸಗಳಿಗೆ ನಿಯೋಜನೆ ಮಾಡಲಾಗುತ್ತಿದೆ. ರಜಾ ಅವಧಿಯಲ್ಲಿ ದಾಖಲಾತಿ ಆಂದೋಲನ ನಡೆಸಿದ್ದಾರೆ. ನಾಲ್ಕು ಸಾವಿರಕ್ಕೂ ಹೆಚ್ಚು ಉಪನ್ಯಾಸಕರನ್ನು ವಾರದ ಮೂರು ದಿನ ಬೇರೊಂದು ಕಾಲೇಜಿಗೆ ನಿಯೋಜನೆ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಮೇ 7ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಡಿಮೆ ಕಾರ್ಯಭಾರ ಇರುವ ಉಪನ್ಯಾಸಕರನ್ನು ಬೇರೆ ಕಾಲೇಜಿಗೆ ನಿಯೋಜಿಸಲು ಹೊರಟಿದೆ. ಇದು ಅವೈಜ್ಞಾನಿಕ ಕ್ರಮ ಎಂದರು.

‘ಕಾರ್ಯಭಾರ ಕಡಿಮೆ ಇರುವ ಉಪನ್ಯಾಸಕರ ಪಟ್ಟಿ ಮಾಡುವಾಗ 320 ವಿದ್ಯಾರ್ಥಿಗಳಿಗೆ ಒಬ್ಬ ಉಪನ್ಯಾಸ ಎಂಬ ಅನುಪಾತ ಅವೈಜ್ಞಾನಿಕ. ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ 40 ವಿದ್ಯಾರ್ಥಿಗಳಿಗೆ ಒಬ್ಬ ಉಪನ್ಯಾಸಕರನ್ನು ನಿಗದಿ ಮಾಡಬೇಕು. ಈ ಬೇಡಿಕೆಗೆ ಸ್ಪಂದಿಸದೆ ಸುತ್ತೋಲೆ ಹೊರಡಿಸಲಾಗಿದೆ. ಉಪನ್ಯಾಸಕರು ವೈಯಕ್ತಿಕವಾಗಿ ಮತ್ತು ಸಾಂಘಿಕವಾಗಿ ಹತ್ತಾರು ಕೆಲಸಗಳನ್ನು ನಿಭಾಯಿಸಬೇಕಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಗ್ರಾಮೀಣ ಮತ್ತು ನಗರ ಪ್ರದೇಶದ ಬಹುತೇಕ ಕಾಲೇಜುಗಳನ್ನು ಮುಚ್ಚಲಾಗುತ್ತಿದೆ’ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಸಿ.ಕೆ. ಮೂರ್ತಿ, ದಿನೇಶ್, ದೇವಿಪ್ರಸಾದ್, ಸತೀಶ್, ಶ್ರೀನಿವಾಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-484898337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.