ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ್ ತಿಳಿಸಿದ್ದಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಚಿಕ್ಕನಾಯಕನಹಳ್ಳಿ, ಹೊಯ್ಸಳಕಟ್ಟೆ, ತಿಮ್ಮನಹಳ್ಳಿ ಹಾಗೂ ದೊಡ್ಡರಾಂಪುರ ವಸತಿ ನಿಲಯಗಳಲ್ಲಿ ತಲಾ 50 ಸ್ಥಾನ, ಹುಳಿಯಾರು ಮತ್ತು ಕಂದಿಕೆರೆ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 45 ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಚಿಕ್ಕನಾಯಕನಹಳ್ಳಿಯಲ್ಲಿ 50 ಸ್ಥಾನಗಳು ಲಭ್ಯವಿವೆ.

ಅನುದಾನಿತ ವಸತಿ ನಿಲಯಗಳ ಪೈಕಿ ಹುಳಿಯಾರಿನ ಕನಕದಾಸ ಸಾರ್ವಜನಿಕ ಖಾಸಗಿ ಅನುದಾನಿತ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 50 ಸ್ಥಾನಗಳು ಹಾಗೂ ಕುಪ್ಪೂರು ತಮಡಿಹಳ್ಳಿಯ ಮಲ್ಲಿಕಾರ್ಜುನ ಸ್ವಾಮಿ ಅನಾಥಾಲಯದಲ್ಲಿ 45 ಸ್ಥಾನಗಳು ಲಭ್ಯವಿವೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ, ಚಿಕ್ಕನಾಯಕನಹಳ್ಳಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 250 ಸ್ಥಾನಗಳು, ಹುಳಿಯಾರಿನ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 125 ಸ್ಥಾನಗಳು ಹಾಗೂ ಚಿಕ್ಕನಾಯಕನಹಳ್ಳಿಯ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 100 ಸ್ಥಾನಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 8 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 16 ಅಂತಿಮ ದಿನಾಂಕ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-17-805827263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.