ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಪ್ರತಿಭೆಗಳು ಇಲ್ಲಿನ ಶೈಕ್ಷಣಿಕ ಸೌಲಭ್ಯಗಳನ್ನು ಬಳಸಿಕೊಂಡು ಸಾಧನೆ ಮಾಡುವ ಮೂಲಕ ತಾಲ್ಲೂಕಿಗೆ ಕೀರ್ತಿ ತರಬೇಕು. ಇದಕ್ಕೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಸಮನ್ವಯದ ಶ್ರಮ ಅಗತ್ಯ ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.

ಸೋಮವಾರ ತಾಲ್ಲೂಕಿನ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರೊಂದಿಗೆ ನಡೆಸಿದ ಸಭೆ ನಂತರ ಮಾತನಾಡಿದರು.

ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು ಶೇ 94.25ರಷ್ಟು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಒಟ್ಟು 34 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಹೊರಭಾಗದ ನಗರಗಳಿಗೆ ವಲಸೆ ಹೋಗುವ ಬದಲು, ತಾಲ್ಲೂಕಿನಲ್ಲೇ ಇರುವ 7 ಕಾಲೇಜುಗಳಲ್ಲಿ ಲಭ್ಯವಿರುವ ಗುಣಮಟ್ಟದ ಶಿಕ್ಷಣ ಬಳಸಿಕೊಳ್ಳಬೇಕು. ಈಗಾಗಲೇ 14 ಸಾಧಕ ವಿದ್ಯಾರ್ಥಿಗಳು ಇಲ್ಲಿನ ಕಾಲೇಜುಗಳಲ್ಲೇ ಪ್ರವೇಶ ಪಡೆಯಲು ನಿರ್ಧರಿಸಿರುವುದು ಸಂತಸದ ವಿಷಯ ಎಂದರು.

ತಾಲ್ಲೂಕಿನ ಕಾಲೇಜುಗಳಲ್ಲಿ ಪ್ರಥಮ ಪಿಯುಸಿಯಿಂದಲೇ ಸಿಇಟಿ ಹಾಗೂ ನೀಟ್ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಈ ಕುರಿತು ಪೋಷಕರಲ್ಲಿ ಅರಿವು ಮೂಡಿಸಲು ಶಿಕ್ಷಕರಿಗೆ ಸೂಚಿಸಲಾಗಿದೆ ಎಂದರು.

ಪಟ್ಟಣದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಅಭಿವೃದ್ಧಿಗಾಗಿ ಗಣಿಬಾಧಿತ ಪ್ರದೇಶಾಭಿವೃದ್ಧಿ ಯೋಜನೆಯಡಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಂಪ್ಯೂಟರ್ ಆಧಾರಿತ ನೂತನ ವಿಷಯವನ್ನು ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿ ಎಲ್ಲಾ ವಿಷಯಗಳನ್ನೊಳಗೊಂಡ ಒಂದು ಸುಸಜ್ಜಿತ ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-17-79042909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.