ಚಿಕ್ಕನಾಯಕನಹಳ್ಳಿ: ‘ತಾಲ್ಲೂಕಿನಲ್ಲಿ ಎಲ್ಕೆಜಿಯಿಂದ ಪಿಯುಸಿವರೆಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯದಲ್ಲೇ ಮಾದರಿ ಶೈಕ್ಷಣಿಕ ಕ್ಷೇತ್ರವನ್ನಾಗಿ ರೂಪಿಸುವುದು ನನ್ನ ಆಶಯ. ಕ್ಷೇತ್ರದ ಮಕ್ಕಳ ಶೈಕ್ಷಣಿಕ ಮಟ್ಟ ಹೆಚ್ಚಿಸಿ, ಪ್ರತಿ ಮನೆಯಲ್ಲೂ ಒಬ್ಬ ಸರ್ಕಾರಿ ಅಧಿಕಾರಿಯನ್ನು ಸೃಷ್ಟಿಸಬೇಕಿದೆ’ ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.

ಪಟ್ಟಣದಲ್ಲಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ‘ಜ್ಞಾನಕಲ್ಪ’ ಉಪಕ್ರಮದಡಿ ಶನಿವಾರ ಆಯೋಜಿಸಲಾಗಿದ್ದ ‘ನಮ್ಮ ಮೇಷ್ಟ್ರು ನಮಗೆ ಪ್ರೇರಣೆ’ ಎಂಬ ವಿಶೇಷ ಶಿಕ್ಷಕರ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ರೂಪಿಸಿದ ತಾಲ್ಲೂಕಿನ ಶಿಕ್ಷಕರನ್ನು ಸತ್ಕರಿಸಲಾಯಿತು.

ತಾಲ್ಲೂಕು ಶೇ 94.25ರಷ್ಟು ಗುಣಾತ್ಮಕ ಫಲಿತಾಂಶ ದಾಖಲಿಸಿದೆ. ಫಲಿತಾಂಶದ ಶೇಕಡಾವಾರು ಕಳೆದ ಬಾರಿಗಿಂತ ಕೊಂಚ ಕಡಿಮೆಯಾಗಿದೆ ಎಂದು ಶಿಕ್ಷಕರು ಧೃತಿಗೆಡಬೇಕಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ. ಈ ಫಲಿತಾಂಶ ನಮಗೆ ಮುಂಬರುವ ದಿನಗಳಿಗೆ ಎಚ್ಚರಿಕೆ ಗಂಟೆಯಾಗಬೇಕು ಎಂದರು.

ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ, ನೀಟ್, ಪ್ರೇರಣಾ ಹಾಗೂ ಸಂಜೀವಿನಿ ಶಿಬಿರ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಚಿತ ತರಬೇತಿ ನೀಡಲಾಗುವುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಕಾಂತರಾಜು, ಅಕ್ಷರ ದಾಸೋಹ ಅಧಿಕಾರಿ ಗವಿರಂಗಪ್ಪ, ಸಂಪನ್ಮೂಲ ಶಿಕ್ಷಕ ರಮೇಶ್, ಎಸ್ಎಸ್ಎಲ್ಸಿಯಲ್ಲಿ 623 ಅಂಕ ಗಳಿಸಿದ ಯಶ್ವಂತ್ ಕೆ.ಮಾತನಾಡಿದರು. ಕೆಪಿಎಸ್ ಶಾಲೆಯ ಮಹಾಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-17-1879149558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.