ಚಿಕ್ಕನಾಯಕನಹಳ್ಳಿ: ಪರೀಕ್ಷಾ ಪ್ರಾಧಿಕಾರಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಗಳು ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಭವಿಷ್ಯದ ವಿಚಾರದಲ್ಲಿ ಹುಡುಗಾಟ ಆಡಬಾರದು ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.

ಪಟ್ಟಣದಲ್ಲಿ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ಜ್ಞಾನಕಲ್ಪ ಉಪಕ್ರಮದಡಿ ಆಯೋಜಿಸಿದ್ದ ಒಂದು ತಿಂಗಳ ಉಚಿತ ನೀಟ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಪರೀಕ್ಷಾ ಮಂಡಳಿಗಳ ಗೊಂದಲಕಾರಿ ನಿರ್ಧಾರಗಳು ಆಕ್ಷೇಪಾರ್ಹ. ಎಸ್ಎಸ್ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ಹಿಂದಿ ಭಾಷೆ ವಿಷಯವಾಗಿ ಗೊಂದಲ ಮೂಡಿಸಲಾಯಿತು. ಪ್ರಸ್ತುತ ನೀಟ್ ಪರೀಕ್ಷೆಗಳು ಹಾಗೂ ಹಿರಿಯೂರಿನಲ್ಲಿ ನಡೆದ ಕೃಷಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಅಸಹಜವಾಗಿ ಹೆಚ್ಚು ಅಂಕಗಳು ಬಂದಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಗೊಂದಲಗಳಿಗೆ ಯಾರ ಬೇಜವಾಬ್ದಾರಿತನ ಕಾರಣ ಎಂಬುದನ್ನು ಪತ್ತೆಹಚ್ಚಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಪರೀಕ್ಷಾ ವ್ಯವಸ್ಥೆಯಲ್ಲಿ ಎಷ್ಟೇ ಗೊಂದಲಗಳಿದ್ದರೂ ವಿದ್ಯಾರ್ಥಿಗಳು ಧೃತಿಗೆಡಬಾರದು. ಆಳವಾದ ಜ್ಞಾನವಿದ್ದರೆ ಇಂತಹ ಯಾವುದೇ ಸವಾಲುಗಳನ್ನು ಧೈರ್ಯವಾಗಿ ಎದುರಿಸಬಹುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್. ಮಾತನಾಡಿ, ಈ ಉಚಿತ ತರಬೇತಿ ಶಿಬಿರಕ್ಕೆ ತಾಲ್ಲೂಕು ಮಾತ್ರವಲ್ಲದೆ ಅಕ್ಕಪಕ್ಕದ ತಾಲ್ಲೂಕುಗಳಿಂದಲೂ ವಿದ್ಯಾರ್ಥಿಗಳು ಬರಲಿದ್ದಾರೆ. ಈ ವರ್ಷ ಜ್ಞಾನಕಲ್ಪ ಸಂಸ್ಥೆಯು ನಾಲ್ಕು ಹಂತಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದೆ. ಸಿಇಟಿ ಹಾಗೂ ಕೃಷಿ ವಿಜ್ಞಾನ ಕೋರ್ಸ್ಗಳಿಗೆ ವಿಶೇಷ ಪ್ರಾಯೋಗಿಕ ತರಬೇತಿ ನೀಡಿದ್ದರ ಫಲವಾಗಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದರು.

ಸಿಇಟಿ ಮತ್ತು ನೀಟ್ ತರಬೇತಿ ಸಮಿತಿಯ ಅಧ್ಯಕ್ಷ ನಾಗರಾಜು ಮಾತನಾಡಿದರು. ಉಪನ್ಯಾಸಕ ಸಂದೇಶ್, ಸಿಇಟಿ ನೀಟ್ ತರಬೇತಿ ಸಮಿತಿಯ ಜಾಕೀರ್, ವರಮಹಾಲಕ್ಷ್ಮಿ, ಯೋಗಿಶ್, ಸೋಮಶೇಖರ್, ಶಿವಣ್ಣ, ಸಾಖ್ಯಾಗೌತಮ್, ಜಾಕೀರ್, ತಾ. ಕಸಾಪ ಅದ್ಯಕ್ಷ ಎಂ.ಎಸ್.ರವಿಕುಮಾರ್, ಪುರಸಭಾ ಮಾಜಿ ಸದಸ್ಯ ಎಂ.ಎನ್.ಸುರೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-17-987307445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.