ಚಿಕ್ಕೋಡಿ: ‘ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಮುಂದೆ ಬರಬೇಕು. ಎಪಿಜೆ ಅಬ್ದುಲ್ ಕಲಾಂ ಅವರಂಥ ಸಾಧಕರನ್ನು ಆದರ್ಶವಾಗಿಟ್ಟುಕೊಂಡು ಬೆಳೆಯಬೇಕು. ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಪಡೆದುಕೊಳ್ಳುವುದೇ ನಿಜವಾದ ಸಾಧನೆ’ ಎಂದು ಹಿರಿಯ ವಕೀಲ ಎಂ.ಬಿ. ಪಾಟೀಲ ಹೇಳಿದರು.

ತಾಲ್ಲೂಕಿನ ಖಜಗೌಡನಹಟ್ಟಿ ಗ್ರಾಮದಲ್ಲಿ ಚಿಕ್ಕೋಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ನೈತಿಕ ಮೌಲ್ಯ ಇಲ್ಲದ ಶಿಕ್ಷಣ ಎಷ್ಟಿದ್ದರೂ ವ್ಯರ್ಥ. ಹೀಗಾಗಿ ವಿದ್ಯಾರ್ಥಿಗಳು ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಆದರ್ಶವಾಗಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಚಿಕ್ಕೋಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಂ.ಎಸ್. ಮಾಳಗೆ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ, ಸಂವೇದನೆಗಳ ಅಗತ್ಯವಿದೆ. ವಿದ್ಯಾರ್ಥಿಗಳು ನಿಶ್ಚಿತ ಗುರಿ ಇಟ್ಟುಕೊಳ್ಳಬೇಕು. ದೇಶ ಸೇವೆಯೇ ಈಶ ಸೇವೆ ಎಂದು ತಿಳಿದುಕೊಳ್ಳಬೇಕು. ಇಂತಹ ಶಿಬಿರದಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳುವ ಮೂಲಕ ಸಮಾಜದ ಋಣ ತೀರಿಸಬೇಕು’ ಎಂದು ಹೇಳಿದರು.

ಎನ್ಎಸ್ಎಸ್ ಶಿಬಿರದ ಸಂಯೋಜನಾಧಿಕಾರಿ ದೇವೇಂದ್ರ ಮಂಡೇದ, ಯಲ್ಲಪ್ಪ ಖೋತ, ಮಯೂರ ಅಮಾತೆ, ಮಂಜು ದೊಡಬಂಗಿ, ಮಹಾದೇವ ಪಾಟೀಲ, ಎಸ್ಡಿಎಂಸಿ ಅಧ್ಯಕ್ಷ ಭೀಮಪ್ಪ ಜೋಡಕುರಳಿ, ರವಿ ಪೂಜಾರಿ, ಲಕ್ಷ್ಮಣ ಪೂಜಾರಿ, ಅಪ್ಪಾಸಾಹೇಬ ಪಾಟೀಲ, ರೋಹಿಣಿ ಜೆ, ರಾಘವೇಂದ್ರ ಖೋತ, ಕೀರ್ತಿ ಎತ್ತಿನಮಠ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-837291454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.